HomeLatest Newsಗರ್ಭಿಣಿ ಶೌಚಾಲಯದಲ್ಲಿದ್ದಾಗ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಆಸ್ಪತ್ರೆ ಸಿಬ್ಬಂದಿ

ಗರ್ಭಿಣಿ ಶೌಚಾಲಯದಲ್ಲಿದ್ದಾಗ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಆಸ್ಪತ್ರೆ ಸಿಬ್ಬಂದಿ

ಬೆಂಗಳೂರು: ರಾಜ್ಯ ರಾಜಧಾಅನಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಗರ್ಭಿಣಿ ಶೌಚಾಲಯಕ್ಕೆ ಹೋಗಿದ್ದಾಗ ಅಲ್ಲಿನ ಸಿಬ್ಬಂದಿ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಸರ್ಜಾಪುರ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯೊಂದರ ಶೌಚಾಲಯದಲ್ಲಿ ಗರ್ಭಿಣಿಯೊಬ್ಬರ ವಿಡಿಯೋ ಚಿತ್ರೀಕರಿಸಲು ಆಸ್ಪತ್ರೆ ಸಿಬ್ಬಂದಿಯೊಬ್ಬ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

36 ವರ್ಷದ ಮಹಿಳೆ ಈ ಬಗ್ಗೆ ದೂರು ನೀಡಿದ್ದು, ಮೇ 21ರಂದು ಅವರು ಸರ್ಜಾಪುರ ರಸ್ತೆಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಅಲ್ಲಿನ ಶೌಚಾಲಯವನ್ನು ಬಳಸುತ್ತಿದ್ದಾಗ, ಆಸ್ಪತ್ರೆಯ ಸಿಬ್ಬಂದಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುತ್ತಾ ತನ್ನ ಮೊಬೈಲ್ ಫೋನ್ ಬಳಸಿ ಶೌಚಾಲಯದ ಒಳಗಿನ ದೃಶ್ಯಗಳನ್ನು ರಹಸ್ಯವಾಗಿ ವಿಡಿಯೋ ಮಾಡಲು ಯತ್ನಿಸುತ್ತಿರುವುದನ್ನು ಗಮನಕ್ಕೆ ಬಂದಿದೆ.

ತಮ್ಮ ಖಾಸಗಿ ದೃಶ್ಯಗಳನ್ನು ಆತ ಕ್ಯಾಪ್ಚರ್ ಮಾಡಿರಬಹುದು ಎಂಬ ಅನುಮಾನದಿಂದ ಮಹಿಳೆ ಶೌಚಾಲಯದಿಂದ ಹೊರಬಂದು ಆತನನ್ನು ತಕ್ಷಣವೇ ಪ್ರಶ್ನಿಸಿದ್ದಾರೆ. ತಾನು ಸಿಕ್ಕಿಬಿದ್ದಿರುವುದನ್ನು ಅರಿತ ಆಸ್ಪತ್ರೆಯ ಸಿಬ್ಬಂದಿ ಸ್ಥಳದಿಂದ ತಕ್ಷಣವೇ ಕಾಲ್ಕಿತ್ತಿದ್ದಾನೆ ಎಂದು ಹೇಳಲಾಗಿದೆ. ದೂರಿನಲ್ಲಿ ಮಹಿಳೆ ತಾನು ಗರ್ಭಿಣಿಯಾಗಿದ್ದು, ಈ ಘಟನೆಯಿಂದ ತಮಗೆ ತೀವ್ರ ಮಾನಸಿಕ ಒತ್ತಡ, ಭಯ ಹಾಗೂ ಅಪಮಾನ ಉಂಟಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ಕೃತ್ಯ ಎಸಗಿದ ಆರೋಪಿ ಹಾಗೂ ಈ ಬಗ್ಗೆ ಸೂಕ್ತ ಸುರಕ್ಷತೆ ವಹಿಸದ ಆಸ್ಪತ್ರೆಯ ಮ್ಯಾನೇಜ್‌ಮೆಂಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮಹಿಳೆಯ ದೂರಿನ ಅನ್ವಯ ವರ್ತೂರು ಪೊಲೀಸರು ಆರೋಪಿ ಸಿಬ್ಬಂದಿ ಹಾಗೂ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 77 (Voyeurism – ರಹಸ್ಯವಾಗಿ ವೀಕ್ಷಿಸುವುದು/ಚಿತ್ರೀಕರಿಸುವುದು), ಸೆಕ್ಷನ್ 79 (ಮಹಿಳೆಯ ಘನತೆಗೆ ಧಕ್ಕೆ ತರುವುದು), ಸೆಕ್ಷನ್ 62 (ಅಪರಾಧಕ್ಕೆ ಯತ್ನ) ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪ್ರಾಥಮಿಕ ತನಿಖೆಯ ವೇಳೆ ಆರೋಪಿಯ ಮೊಬೈಲ್‌ನಲ್ಲಿ ಯಾವುದೇ ಫೋಟೋ ಅಥವಾ ವಿಡಿಯೋ ಪತ್ತೆಯಾಗಿಲ್ಲ. ಆದರೆ, ಆತ ದೃಶ್ಯಗಳನ್ನು ಡಿಲೀಟ್ ಮಾಡಿರುವ ಸಾಧ್ಯತೆ ಇರುವುದರಿಂದ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆರೋಪಿ ಹಾಗೂ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular