HomeSportsಮಾರ್ಚ್ 28ರಂದು IPL ಉದ್ಘಾಟನಾ ಪಂದ್ಯ: ಆನ್ ಲೈನ್ ನಲ್ಲಿ ಮಾತ್ರ ಟಿಕೆಟ್ ಬುಕ್ಕಿಂಗ್: ಮೆಟ್ರೋದಲ್ಲಿ...

ಮಾರ್ಚ್ 28ರಂದು IPL ಉದ್ಘಾಟನಾ ಪಂದ್ಯ: ಆನ್ ಲೈನ್ ನಲ್ಲಿ ಮಾತ್ರ ಟಿಕೆಟ್ ಬುಕ್ಕಿಂಗ್: ಮೆಟ್ರೋದಲ್ಲಿ ಉಚಿತ ಸಂಚಾರಕ್ಕೆ ಅವಕಾಶ

ಬೆಂಗಳೂರು: ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಹತ್ವದ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಐಪಿಎಲ್ ಪಂದ್ಯಕ್ಕೆ ಆನ್ ಲೈನ್ ಮೂಲಕವಾಗಿ ಮಾತ್ರ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ಐಪಿಎಲ್ ಪಂದ್ಯ ವೀಕ್ಷಣೆಗೆ ಬರುವವರಿಗೆ ಮೆಟ್ರೋದಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ಐಪಿಎಲ್ ಪಂದ್ಯ ನೋಡಲು ಸ್ಟೇಡಿಯಂಗೆ ಬರುವವರಿಗೆ ಪಾರ್ಕಿಂಗ್ ಸೌಲಭ್ಯ ಕಲ್ಲಿಸಲಾಗುತ್ತಿದೆ. ಪಂದ್ಯ ಆರಂಭಕ್ಕೆ 4 ಗಂಟೆ ಮುಂಚಿತವಾಗಿ ಸ್ಟೇಡಿಯಂಗೆ ಬರಬೇಕು. ಸ್ಟೇಡಿಯಂನ 27 ಗೇಟ್ ಗಳ ಮೂಲಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಕ್ಯೂ ಆರ್ ಕೋಡ್ ಮೂಲಕ ಕ್ರೀಡಾಂಗಣ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಪಂದ್ಯಾವಳಿಗೆ 5 ಗಂಟೆ ಮುನ್ನ ಕ್ಯೂ ಆರ್ ಕೋಡ್ ಜನರೇಟ್ ಆಗಲಿದೆ ಎಂದು ವಿವರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಪಿಎಲ್ 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಆರಂಭವಾಗಲಿದ್ದು, ಬೆಂಗಳೂರುನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಿಸಲಿದೆ. ಈ ಪಂದ್ಯದ ಟಿಕೆಟ್ ಗಳು ಇಂದಿನಿಂದ ಲಭ್ಯವಿರಲಿದೆ ಎಂದು ಆರ್ ಸಿಬಿ ತಿಳಿಸಿದೆ. ಆರ್ ಸಿಬಿಯ ಅಧಿಕೃತ ವೆಬ್ ಸೈಟ್ ಮೂಲಕ ಮಾತ್ರ ಟಿಕೆಟ್ ಗಳನ್ನು ಖರೀದಿಸಬಹುದು ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular