HomeKarnatakaBIG NEWS: ಐಟಿ ದಾಳಿ: ಮಾಜಿ ಕಾರ್ಪೊರೇಟರ್ ಮೈದುನನ ಮನೆಯಲ್ಲಿ 23 ಬಾಕ್ಸ್ ಗಳಲ್ಲಿ ಪತ್ತೆಯಾಯ್ತು...

BIG NEWS: ಐಟಿ ದಾಳಿ: ಮಾಜಿ ಕಾರ್ಪೊರೇಟರ್ ಮೈದುನನ ಮನೆಯಲ್ಲಿ 23 ಬಾಕ್ಸ್ ಗಳಲ್ಲಿ ಪತ್ತೆಯಾಯ್ತು 40 ಕೋಟಿ ರೂಪಾಯಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಮೈದುನನ ಮನೆಯಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ಪತ್ತೆಯಾಗಿದೆ.

ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಅವರ ಮೈದುನ ಪ್ರದೀಪ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಇನ್ನೂ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಪತಿ ಅಂಬಿಕಾಪತಿ ಸಹೋದರ ಪ್ರದೀಪ್ ಗೆ ಸೆರಿದ ಆರ್.ಟಿ.ನಗರದ ಫ್ಲಾಟ್ ಗಳ ಮೇಲೆ ದಾಳಿ ನಡೆಸಲಾಗಿದ್ದು, ಬೆಡ್ ರೂಮ್ ನ ಮಂಚದ ಕೆಳಗೆ 23 ಬಾಕ್ಸ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಬಾಕ್ಸ್ ಗಳಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ಹಣವಿದ್ದು, ಈ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದೇ ವೇಳೆ ಪ್ರದೀಪ್ ಅವರನ್ನು ತೀವ್ರ ವಿಚಾರಣೆ ನಡೆಸಲಾಗಿದ್ದು, ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿಯೂ ಪರಿಶೀಲನೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular