HomeLatest NewsBREAKING: ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ, ವಸ್ತು...

BREAKING: ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ, ವಸ್ತು ಕಳ್ಳತನ

ಬೆಂಗಳೂರು: ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಕೊರೆದು ಕಳ್ಲರು ಕೋಟ್ಯಂತರ ರೂಪಾಯಿ ಬೆಳ್ಳಿ ಆಭರಣ, ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಕಳ್ಳತನ ನಡೆದಿದೆ. ಗೋಡೆ ಕೊರೆದು ಜಿನ್ನದಂಗಡಿಗೆ ನುಗ್ಗಿರುವ ಕಳ್ಳರು ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ, ಬೆಳ್ಳಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಂತ ಯೋಜಿತವಾಗಿ ಕಳ್ಳತನ ಮಾಡಲಾಗಿದೆ. ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳ್ಳನ್ನು ಕದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳ್ಳತನದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಳಿಗೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಕಳ್ಳರು ಗೋಡೆ ಕೊರೆಯಲು ಬಳಸಿದ ವಿಧಾನಗಳನ್ನು ಪೊಲೀಸರು ಗಮನಿಸುತ್ತಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ತೀವ್ರ ಶೋಧ ಕಾರ್ಯ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular