HomeLatest NewsBREAKING: ಬೆಂಗಳೂರಿನಲ್ಲಿ ಭೀಕರ ಕೊಲೆ: 200 ರೂಪಾಯಿ ಸಾಲ ವಾಪಸ್ ಕೇಳಿದ್ದಕ್ಕೆ ಟೀ ಅಂಗಡಿ ಮಾಲೀಕನನ್ನೇ...

BREAKING: ಬೆಂಗಳೂರಿನಲ್ಲಿ ಭೀಕರ ಕೊಲೆ: 200 ರೂಪಾಯಿ ಸಾಲ ವಾಪಸ್ ಕೇಳಿದ್ದಕ್ಕೆ ಟೀ ಅಂಗಡಿ ಮಾಲೀಕನನ್ನೇ ಹತ್ಯೆಗೈದ ವ್ಯಕ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. 200 ರೂಪಾಯಿ ಸಾಲ ವಾಪಸ್ ಕೇಳಿದ್ದಕ್ಕೆ ಟೀ ಅಂಗಡಿ ಮಾಲೀಕನನ್ನೇ ವ್ಯಕ್ತಿ ಹೊಡೆದು ಕೊಂದಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ (41) ಕೊಲೆಯಾದ ಟೀ ಅಂಗಡಿ ಮಾಲೀಕ. ಮುನಿಯಪ್ಪ ಎಂಬಾತ ಕೊಲೆ ಮಾಡಿರುವ ಆರೋಪಿ.

ಬೆಳಿಗ್ಗೆ ಟೀ ಕುಡಿಯಲೆಂದು ಅಂಗಡಿಗೆ ಬಂದಿದ್ದ ಮುನಿಯಪ್ಪ ಸಾಲ ಕೇಳಿದ್ದ. ಮತ್ತೆ ಸಾಲ ಕೊಡುವುದಿಲ್ಲ. ಈಗಾಗಲೇ ಕೊಟ್ಟಿರುವ 200 ರೂಪಾಯಿ ಸಾಲ ತೀರಿಸುವಂತೆ ಹೇಳಿದ್ದಾರೆ. ಇದೇ ವಿಚಾರವಾಗಿ ಮಂಜುನಾಥ್ ಹಾಗೂ ಮುನಿಯಪ್ಪ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಮಂಜುನಾಥ್ ತಲೆಗೆ ದೊಣ್ಣೆಯಿಂದ ಹೊಡೆದು ಹಲ್ಲೆ ನಡೆಸಿ ಮುನಿಯಪ್ಪ ಪರಾರಿಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮುನಿಯಪ್ಪ ಈ ಹಿಂದೆ ತಾಯಿಗೆ ಚಾಕುವಿನಿಂದ ಇರಿದು ಜೈಲು ಸೇರಿದ್ದ. ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿ ಬಂದವನು ಈಗ ಟೀ ಅಂಗಡಿ ಮಾಲೀಕನನ್ನು ಹತ್ಯೆ ಮಾಡಿದ್ದಾನೆ.

ಸದ್ಯ ಆರೋಪಿ ಮುನಿಯಪ್ಪನನ್ನು ದೊಡ್ಡಬೆಳಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular