HomeKarnatakaBIG NEWS: ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದಕ್ಕೆ ಫೈರಿಂಗ್; ಚಿರತೆ ಬಲಿಯಾದ ಬಗ್ಗೆ...

BIG NEWS: ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದಕ್ಕೆ ಫೈರಿಂಗ್; ಚಿರತೆ ಬಲಿಯಾದ ಬಗ್ಗೆ ಸಿಸಿಎಫ್ ಸ್ಪಷ್ಟನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಯಲ್ಲಿ ಕಳೆದ ಮೂರು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಬಲಿಯಾಗಿದೆ.

ಚಿರತೆ ಬಲಿಯಾಗಿರುವ ಬಗ್ಗೆ ಸ್ಪಷ್ಟನೆ ನೀಡಿರುವ ಸಿಸಿಎಫ್ ಲಿಂಗರಾಜು, ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ಎರಡು ಬಾರಿ ದಾಳಿ ನಡೆಸಿತ್ತು. ಚಿರತೆ ದಾಳಿಯಿಂದ ಡಾ.ಕಿರಣ್ ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಗುಂಡೆಟಿಗೆ ಚಿರತೆ ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬನ್ನೇರುಘಟ್ಟ ಉದ್ಯಾನವನದ ಆಸ್ಪತ್ರೆಯಲ್ಲಿ ಚಿರತೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಚಿರತೆ ಮೃತಪಟ್ಟಿರುವುದು ದೃಢವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದರಿಂದ ಗುಂಡಿನ ದಾಳಿ ನಡೆಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯ್ದೆಯಲ್ಲಿ ಇದಕ್ಕೆ ಅವಕಾಶವೂ ಇದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular