HomeKarnatakaBIG NEWS: ಬೆಂಗಳೂರಿನ ರೈಲ್ವೆ ಅಂಡರ್ ಪಾಸ್ ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್

BIG NEWS: ಬೆಂಗಳೂರಿನ ರೈಲ್ವೆ ಅಂಡರ್ ಪಾಸ್ ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್

ಬೆಂಗಳೂರು: ರಾಜ್ಯ ರಾಜಧಾನಿಯ ಹೃದಯಭಾಗ ಶೇಷಾದ್ರಿಪುರಂ ರೈಲ್ವೆ ಅಂಡರ್ ಪಾಸ್ ನಲ್ಲಿ ಬೃಹತ್ ತಗಡಿನ ಶೀಟ್ ಕಳಚಿ ಬಿದ್ದಿರುವ ಘಟನೆ ನಡೆದಿದೆ.

ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಇಂದು ಬೆಳಿಗ್ಗೆ ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗಕ್ಕೆ ಅಳವಡಿಸಲಾಗಿದ್ದ ಬೃಹತ್ ತಗಡಿನ ಶೀಟ್ ಸಂಚರಿಸುತ್ತಿದ್ದ ಬಸ್‌ಗೆ ತಗುಲಿ ನಡುರಸ್ತೆಯಲ್ಲೇ ಕಳಚಿಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಡರ್ ಪಾಸ್‌ನ ಮೇಲ್ಭಾಗದ ಶೀಟ್‌ಗಳನ್ನು ಹಿಡಿದಿಟ್ಟಿದ್ದ ಕಬ್ಬಿಣದ ಕ್ಲಿಪ್‌ಗಳು ತುಕ್ಕು ಹಿಡಿದು ಕಟ್ ಆಗಿದ್ದವು. ಈ ವೇಳೆ ಬಸ್ಸು ಹಾದುಹೋಗುವಾಗ ಶೀಟ್‌ಗೆ ತಗುಲಿದ ಪರಿಣಾಮ, ಭಾರೀ ಗಾತ್ರದ ತಗಡು ರಸ್ತೆಗೆ ಬಿದ್ದಿದೆ.

ಸದಾ ವಾಹನ ದಟ್ಟಣೆಯಿಂದ ಕೂಡಿರುವ ಈ ರಸ್ತೆಯಲ್ಲಿ ಶೀಟ್ ಬೀಳುವಾಗ ಯಾವುದೇ ದ್ವಿಚಕ್ರ ವಾಹನ ಅಥವಾ ಪಾದಚಾರಿಗಳು ಸಂಚಿರಿಸುತ್ತಿರಲಿಲ್ಲ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ. ಸದ್ಯ ಬಿದ್ದಿರುವ ಶೀಟ್ ಮಾತ್ರವಲ್ಲದೆ, ಪಕ್ಕದಲ್ಲಿರುವ ಇತರ ಹಲವು ತಗಡಿನ ಶೀಟ್‌ಗಳ ಕ್ಲಿಪ್‌ಗಳು ಕೂಡ ತುಕ್ಕು ಹಿಡಿದು ತುಂಡಾಗಿವೆ. ಅವುಗಳು ಕೂಡ ಯಾವುದೇ ಕ್ಷಣದಲ್ಲಿ ಕೆಳಗೆ ಬೀಳುವ ಸಾಧ್ಯತೆ ಇದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಶೇಷಾದ್ರಿಪುರಂ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಸ್ತೆಯಲ್ಲಿದ್ದ ಶೀಟ್ ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಅಲ್ಲದೆ, ಉಳಿದ ಅಪಾಯಕಾರಿ ಶೀಟ್‌ಗಳ ಬಗ್ಗೆ ರೈಲ್ವೆ ಇಲಾಖೆಗೆ ಮಾಹಿತಿ ರವಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular