HomeKarnatakaBIG NEWS: ಬೆಂಗಳೂರಿನಲ್ಲಿ ಮಳೆ ಅನಾಹುತ: ಪ್ರತ್ಯೇಕ ಘಟನೆಯಲ್ಲಿ 9 ಜನರು ಸಾವು: ವಾಹನ ಸಂಚಾರ...

BIG NEWS: ಬೆಂಗಳೂರಿನಲ್ಲಿ ಮಳೆ ಅನಾಹುತ: ಪ್ರತ್ಯೇಕ ಘಟನೆಯಲ್ಲಿ 9 ಜನರು ಸಾವು: ವಾಹನ ಸಂಚಾರ ಸಂಫುರ್ಣ ಅಸ್ತವ್ಯಸ್ತ

ಬೆಂಗಳೂರು: ರಣ ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ನಿನ್ನೆ ವರುಣ ದೇವ ತಂಪೆರೆದಿದ್ದಾನೆ. ಆದರೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿದೆ. ಸಿಲಿಕಾನ್ ಸಿಟಿ ಬೆಂಗಳುರಿನಲ್ಲಿ ಸಾಲು ಸಾಲು ಅನಾಹುತಗಳು ಸಂಭವಿಸಿದ್ದು, ಹಲವೆಡೆ ಬೃಹತ್ ಮರಗಳು ರಸ್ತೆ ಮೇಲೆ ಮುರಿದು ಬಿದ್ದಿವೆ. ಬಹುತೇಕ ರಸ್ತೆಗಳು, ಅಂಡರ್ ಪಾಸ್ ಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ನಿನ್ನೆ ಒಂದು ಗಂಟೆ ಸುರಿದ ಬಿರುಗಾಳಿ ಮಳೆಗೆ ಬೆಂಗಳ್ಯ್ರಿನಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು 9 ಜನರು ಮೃತಪಟ್ಟಿದ್ದಾರೆ. ಗಾಳಿಗೆ ನಗರದ ಹಲವೆಡೆ ಮರಗಳು ಧರೆಗುರುಳಿದ್ದರೆ, ಅಂಡರ್​​ ಪಾಸ್​​ ಸೇರದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವ ಕಾರಣ ಸಂಚಾರ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಕೆಲ ಮಹತ್ವದ ಮಾಹಿತಿಗಳನ್ನು ಹಚಿಕೊಂಡಿದ್ದಾರೆ.

ವರುಣಾರ್ಭಟಕ್ಕೆ ಕೆಲ ಅಂಡರ್ ಪಾಸ್ ನಲ್ಲಿ ನಿಂತಿರುವ ನೀರು ಇಂದು ಕೂಡ ಹಾಗೇ ಉಳಿದುಕೊಂಡಿದೆ. ಲೌರಿ ಅಂಡರ್‌ಪಾಸ್‌ನಲ್ಲಿ ಮಳೆ ನೀರು ನಿಂತಿರುವುದರಿಂದ ಸುಗಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಮಹದೇವಪುರ ಕಡೆಗೆ ನಿಧಾನಗತಿಯ ಸಂಚಾರವಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಆರ್.ಸರ್ಕಲ್ ಅಂಡರ್ ಪಾಸ್​​​​ ಕೂಡ ಜಲಾವೃತವಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿದ್ದಾರೆ. ಇಂದು ಹಲವೆಡೆ ವಾಹನ ಸಂಚಾರದಲ್ಲಿ ಅಡಚಣೆಯುಂಟಾಗಿದೆ.

ಬಿರುಗಾಳಿ ಮಳೆಯ ಅಬ್ಬರಕ್ಕೆ ನಗರದ ವಿವಿಧೆಡೆ ಮರಗಳು ಮತ್ತು ರೆಂಬೆಗಳು ಧರೆಗೆ ಉರುಳಿವೆ. ರಾತ್ರಿಯಿಂದಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇವುಗಳ ತೆರವು ಮಾಡಿ, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆಯಾದರೂ ಕೆಲವೆಡೆ ತೆರವು ಕಾರ್ಯ ಇನ್ನೂ ಮುಂದುವರಿದಿದೆ.

ಭಾಷ್ಯಂ ವೃತ್ತದ ಬಳಿ ಮರ ಬಿದ್ದಿರುವುದರಿಂದ ಕಾವೇರಿ ಥಿಯೇಟರ್ ಜಂಕ್ಷನ್‌ ಕಡೆಗೆ ನಿಧಾನಗತಿಯ ಸಂಚಾರ ಕಂಡುಬಂದಿದೆ. ಬಸವನಗುಡಿಯಲ್ಲಿಯೂ ಬೃಹತ್​​ ಮರ ಬಿದ್ದು ಅವಾಂತರ ಸೃಷ್ಟಿಯಾಗಿದೆ. ವಿದ್ಯಾಪೀಠ ಸರ್ಕಲ್-ಬಸವನಗುಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಡ್ಡಲಾಗಿ ಬೃಹತ್ ಮರ ಬಿದ್ದಿದ್ದು, ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್​​ ಆಗಿದೆ. ಸ್ಥಳಕ್ಕೆ ಬಾರದ ಜಿಬಿಎ ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೊಮ್ಮನಹಳ್ಳಿ ಜಂಕ್ಷನ್ ಬಳಿ ರಸ್ತೆಯಲ್ಲಿವೇ ವಾಹನ ಕೆಟ್ಟು ನಿಂತಿರುವುದರಿಂದ ರೂಪೇನ ಅಗ್ರಹಾರ ಕಡೆಗೆ ನಿಧಾನಗತಿಯ ಸಂಚಾರವಿರೋದಾಗಿ ಬೆಂಗಳೂರು ಸಂಚಾರಿ ​ ಪೊಲೀಸರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular