ಬೆಂಗಳೂರು : ಬೆಂಗಳೂರಿನ ಕೆಜಿ ಹಳ್ಳಿ ಠಾಣೆ ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಕೆಜಿ ಹಳ್ಳಿ ಠಾಣೆ ಸಬ್ ಇನ್ಸ್ಪೆಕ್ಟರ್ ನಾಗರಾಜ್ ಪತ್ನಿ ಶಾಲಿನಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಹೆಚ್ ಬಿ ಆರ್ ಲೇಔಟ್ ನಲ್ಲಿರುವ ಮನೆಯಲ್ಲಿ ಘಟನೆ ನಡೆದಿದೆ. ನೇಣು ಹಾಕಿಕೊಂಡು ಶಾಲಿನಿ ಮೃತಪಟ್ಟಿದ್ದಾರೆ. ನಾಗರಾಜ್ ರನ್ನು 2 ನೇ ಮದುವೆಯಾಗಿದ್ದ ಶಾಲಿನಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.