HomeLatest NewsBREAKING: ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ: ಧಗ ಧಗನೆ ಹೊತ್ತಿ ಉರಿದ ಕಟ್ಟಡ

BREAKING: ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ: ಧಗ ಧಗನೆ ಹೊತ್ತಿ ಉರಿದ ಕಟ್ಟಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿಶ್ವೇಶ್ವರಯ್ಯ ಲೇಔಟ್ ನಲ್ಲಿರುವ ಕೌಶಲ್ಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಶಾಲೆಯ 5ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಶಾಲೆ ಧಗ ಧಗನೆ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಜ್ನಾನ ಭಾರತಿ ಠಾಣೆ ಪೊಲೀಸರು ಆಗಮಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿಯ ತೀವ್ರತೆ ಕ್ಷಣ ಕ್ಷಣಕ್ಕು ಹೆಚ್ಚುತ್ತಿದ್ದು, ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಶಾಲೆಗೆ ರಜೆ ಇದ್ದ ಕಾರಣಕ್ಕೆ ಭಾರಿ ಅನಾಹುತ ತಪ್ಪಿದಂತಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular