ಬೆಂಗಳೂರು: ಬೆಂಗಳೂರಿನ ಶಿವಾಜಿನಗರ ವ್ಯಾಪ್ತಿಯ ಕಾಮರಾಜ ರಸ್ತೆಯಲ್ಲಿ ಕಲ್ವರ್ಟ್ ಕಾಮಗಾರಿ ಹಿನ್ನೆಲೆಯಲ್ಲಿ ಮುಂದಿನ 60 ದಿನಗಲ ಕಾಲ ಈ ಮಾರ್ಗ ಬಂದ್ ಆಗಲಿದ್ದು, ಸಾರ್ವಜನಿಕರು, ವಾಅಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚಿಸುವಂತೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ನಾಲಾ ಕ್ರಾಸ್ ಸಮೀಪ ಹಳೆಯ ಕಲ್ಲಿನ ಕಲ್ವರ್ಟ್ ತೆರವುಗೊಳಿಸಿ ಹೊಸ ಆರ್ ಸಿಸಿ ಕಲ್ವರ್ಟ್ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 60 ದಿನಗಳ ಕಾಲ ಕಾಮರಾಜ್ ರಸ್ತೆ ಬಂದ್ ಆಗಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡುಗಳನ್ನು ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದಿಂದ ನಾಲಾ ರಸ್ತೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಕಾಮರಾಜ ರಸ್ತೆಯ ಕೆ.ಆರ್ ರಸ್ತೆ – ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಡಿಕನ್ಸನ್ ಜಂಕ್ಷನ್ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳ ಮಾಹಿತಿ:
ಕಮರ್ಷಿಯಲ್ ಸ್ಟ್ರೀಟ್ ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದ ಹತ್ತಿರ ಬಲ ತಿರುವು ಪಡೆದು ವೀರಪಿಳ್ಳೆ ಸ್ಟ್ರೀಟ್ ಮೂಲಕ ನಾಗಮ್ಮ ದೇವಸ್ಥಾನದ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.
ಕಬ್ಬನ್ ರಸ್ತೆ ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕೆ.ಆರ್ ರಸ್ತೆ ಕಬ್ಬನ್ ರಸ್ತೆ ಜಂಕ್ಷನ್ ಹತ್ತಿರ ಬಲ ತಿರುವು ಪಡೆದು ಕಬ್ಬನ್ ರಸ್ತೆಯ ಮೂಲಕ ತೆರಳಿ ಮಣಿಪಾಲ್ ಜಂಕ್ಷನ್ ಹತ್ತಿರ ಎಡ ತಿರುವು ಪಡೆದು ಡಿಕನ್ಸನ್ ರಸ್ತೆ ಮೂಲಕ ನೇರವಾಗಿ ತೆರಳಿ ಬ್ಲೂ ಸ್ಟೋನ್ ಹತ್ತಿರ ಬಲ ತಿರುವು ಪಡೆದುಕೊಂಡು ಸೇಂಟ್ ಜಾನ್ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.
ಡಿಸ್ಪೆನ್ಸರಿ ರಸ್ತೆ (ಆಲೀಸ್ ಜಂಕ್ಷನ್) ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಡಿಕನ್ಸನ್ ರಸ್ತೆಯ ಮೂಲಕ ನೇರವಾಗಿ ಚಲಿಸಿ ಬ್ಲೂ ಸ್ಟೋನ್ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆ ಮೂಲಕ ಪುಲಕೇಶಿನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸಬಹುದಾಗಿದೆ.

