HomeKarnatakaBIG NEWS: ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಸೀನಿಯರ್ ವಿದ್ಯಾರ್ಥಿಗಳು

BIG NEWS: ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಸೀನಿಯರ್ ವಿದ್ಯಾರ್ಥಿಗಳು

ಬೆಂಗಳೂರು: ಸೀನಿಯರ್ಸ್ ವಿದ್ಯಾರ್ಥಿಗಳು ಜ್ಯೂನಿಯರ್ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಪ್ರಸಿದ್ಧ ಮ್ಯಾನೇಜ್ಮೆಂಟ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೆ ಒಳಗಾಗಿದ್ದ ವಿದ್ಯಾರ್ಥಿಯನ್ನು ಘಟನೆ ನಡೆದು ಐದು ಗಂಟೆಗಳ ಒಳಗಾಗಿಯೇ ಪೊಲೀಸರು ರಕ್ಷಿಸಿದ್ದು, ಪ್ರಕಣ ಸಂಬಂಧ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಹರಣಕ್ಕೊಳಗಾಗಿದ್ದ ವಿದ್ಯಾರ್ಥಿಯನ್ನು ಒಡಿಶಾ ಮೂಲದ 19 ವರ್ಷದ ರಿಷಭ್ ಮೊಹಂತಿ ಎಂದು ಗುರುತಿಸಲಾಗಿದೆ. ಕೇರಳದ ಶೌರ್ಯ, ಜಯನಗರದ ಸಯ್ಯದ್ ಬಿಲಾಲ್, ಬಿಹಾರದ ನಿಕುಂಜ್ ಹಾಗೂ ಮಹಾರಾಷ್ಟ್ರದ ಅದಿತಾ ರಾಕ್ಸಿ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಮೂವರು ಮತ್ತು ಸಂತ್ರಸ್ತ ವಿದ್ಯಾರ್ಥಿ ಬಿಟಿಎಂ ಲೇಔಟ್ 1ನೇ ಹಂತದಲ್ಲಿರುವ ಒಂದೇ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ರಿಷಭ್ ಮೊಹಂತಿ ತಮ್ಮಿಂದ ಹಣ ಸಾಲ ಪಡೆದಿದ್ದ. ಆದರೆ ಅದನ್ನು ಹಿಂದಿರುಗಿಸದ ಕಾರಣ ಆತನನ್ನು ಕಾರಲ್ಲಿ ಕರೆದುಕೊಂಡು ಹೋಗಿದ್ದೇವೆ ಎಂದು ಆರೋಪಿಗಳು ವಿಚಾರಣೆವೇಳೆ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ರಿಷಭ್ ಈ ಆರೋಪ ಅಲ್ಲಗಳೆದಿದ್ದು, ನಾನು ಯಾವುದೇ ಹಣವನ್ನು ಯಾರಿಂದಲೂ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ

. ರಿಷಭ್‌ನ ಅಪಹರಿಸಿದ ಆರೋಪಿಗಳು 50,000 ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ದುಡ್ಡು ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಹೀಗಾಗಿ ರಿಷಭ್​​ ಸ್ನೇಹಿತನಿಗೆ ಕರೆ ಮಾಡಿ ಹಣದ ವ್ಯವಸ್ಥೆ ಮಾಡಲು ಕೇಳಿದ್ದ. ಮತ್ತೊಂದೆಡೆ ಅಪಹರಣ ನಡೆದ ಬಳಿಕ ರಿಷಭ್​​ ಸ್ನೇಹಿತನೋರ್ವ 112ಕ್ಕೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಆರೋಪಿಗಳು ಅಪಹರಣಕ್ಕೆ ಬಳಸಿದ್ದ ಕಾರಿನ ನೋಂದಣಿ ವಿವರಗಳನ್ನು ನೀಡಿದ್ದ ಎನ್ನಲಾಗಿದೆ.

ಮಾಹಿತಿ ಆಧಾರದಲ್ಲಿ ರಿಷಭ್​​ ಮತ್ತು ಆರೋಪಿಗಳ ಮೊಬೈಲ್​​ ಸಂಖ್ಯೆ ಪಡೆದಿದ್ದ ಪೊಲೀಸರು, ಟವರ್ ಲೊಕೇಶನ್ ಆಧರಿಸಿ ಎಲ್ಲರನ್ನು ಪತ್ತೆಹಚ್ಚಿದ್ದಾರೆ. ಜಯನಗರದಲ್ಲಿರುವ ಮನೆಯಿಂದ ರಿಷಭ್​​ನ ರಕ್ಷಿಸಲಾಗಿದೆ. ಆರೋಪಿಗಳು ಮನೆಯಲ್ಲಿ ವಿದ್ಯಾರ್ಥಿಯನ್ನು ಬಂಧಿಸಿಟ್ಟು, ಚಾಕು ತೋರಿಸಿ ಬೆದರಿಕೆ ಹಾಕಿದ್ದರು. ಹಣಕ್ಕಾಗಿ ಸ್ನೇಹಿತರಿಗೆ ಕರೆ ಮಾಡಲು ಪೀಡಿಸಿದ್ದರು. ಆದರೆ ಆರೋಪಿಗಳು ಅವನಿಗೆ ಯಾವುದೇ ರೀತಿಯ ದೈಹಿಕ ಹಾನಿ ಮಾಡಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular