HomeLatest Newsಪೊಲೀಸರ ವೇಷದಲ್ಲಿ ಉದ್ಯಮಿ ಮನೆಗೆ ಬಂದು 20 ಲಕ್ಷ ಹಣ, ಚಿನ್ನಾಭರಣ ಕಳ್ಳತನ: ಸ್ನೇಹಿತನಿಂದಲೇ ಕೃತ್ಯ

ಪೊಲೀಸರ ವೇಷದಲ್ಲಿ ಉದ್ಯಮಿ ಮನೆಗೆ ಬಂದು 20 ಲಕ್ಷ ಹಣ, ಚಿನ್ನಾಭರಣ ಕಳ್ಳತನ: ಸ್ನೇಹಿತನಿಂದಲೇ ಕೃತ್ಯ

ಬೆಂಗಳೂರು: ಪೊಲೀಸರೆಂದು ಹೇಳಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ಬಂದ ಗ್ಯಾಂಗ್ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿದೆ.

ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್​​ ಮೈಂಡ್​​ ಹೆಸರು ರಿವೀಲ್​ ಆಗಿದೆ.

ಉದ್ಯಮಿ ಹೊಂಬೇಗೌಡ ಮನೆಯಲ್ಲಿ ನಡೆದ ದರೋಡೆ ಹಿಂದೆ ಅವರ ಪ್ರಾಣ ಸ್ನೇಹಿತ ಬೆಟ್ಟೇಗೌಡ ಎಂಬಾತನ ಪಾತ್ರ ಇರುವುದು ಬಯಲಾಗಿದೆ. ಸೈಟ್​​ ಮಾರುವ ವಿಚಾರವಾಗಿ ಸ್ಟಾಂಪ್ ವೆಂಡರ್ ಆಗಿರುವ ಬೆಟ್ಟೇಗೌಡನ ಬಳಿಯೇ ಹೊಂಬೇಗೌಡರು ಪೇಪರ್​​ ಮಾಡಿಸಿದ್ದರು. ಹೀಗಾಗಿ ಸ್ನೇಹಿತನ ಬಳಿ ಸೈಟ್ ಮಾರಿದ ಹಣ ಇದೆ‌ ಎಂದು ತಿಳಿದಿದ್ದ ಆರೋಪಿ, ದರೋಡೆ ಮಾಡುವಂತೆ ಜೈಲಿಂದ ಪೆರೋಲ್ ಮೇಲೆ ಬಿಡುಗಡೆಯಾಗಿದ್ದ ನಾಗೇಂದ್ರನಿಗೆ ಐಡಿಯಾ ಕೊಟ್ಟಿದ್ದ. ಶಿವಾಜಿನಗರದಲ್ಲಿ ಶೂಟಿಂಗ್​​ಗೆ ಎಂದು ಹೇಳಿ ಸಬ್ ಇನ್ಸ್​​ಪೆಕ್ಟರ್ ಡ್ರೆಸ್ ಬಾಡಿಗೆಗೆ ತಂದಿದ್ದ ನಾಗೇಂದ್ರ, ಅದೇ ಡ್ರೆಸ್​​ ಹಾಕಿಕೊಂಡು ಮನೆಗೆ ನುಗ್ಗಿ ದರೋಡೆ ನಡೆಸಿದ್ದ ಎಂಬುದು ಗೊತ್ತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಂಬೇಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ ಪೊಲೀಸರಂತೆ ವೇಷಧರಿಸಿ ಮನೆಗೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು , ತಾವು ಯಲಹಂಕ ಠಾಣೆಯಿಂದ ಬಂದಿದ್ದೇವೆ ಎಂದು ತಿಳಿಸಿದ್ದರು. ಇವರು ಬ್ಯಾಗ್​​ ಮತ್ತು ಡೈರಿಯನ್ನೂ ಹಿಡಿದು ಬಂದಿದ್ದ ಕಾರಣ ಆರಂಭದಲ್ಲಿ ಮನೆಯವರೂ ಆರೋಪಿಗಳ ಮಾತು ನಂಬಿದ್ದರು. ಆದರೆ ಬಳಿಕ ಆರೋಪಿಗಳು ವೃದ್ಧ ದಂಪತಿಯನ್ನು ಬಂದೂಕು ಮತ್ತು ಚಾಕುವಿನಿಂದ ಬೆದರಿಸಿದ್ದರು. ಅಲ್ಲದೆ ಅವರ ಕೈಕಾಲುಗಳನ್ನು ಕಟ್ಟಿ. ನಗದು ಮತ್ತು ಚಿನ್ನಾಭರಣ ದೋಚಿದ್ದರು. ಅನುಮಾಅನಗೊಂಡ ಹೊಂಬೇಗೌಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸ್ದ ಪೊಲೀಸರು ಇದೀಗ ಖತರ್ನಾಕ್ ಗ್ಯಾಂಗ್ ನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular