HomeKarnatakaBIG NEWS: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ

BIG NEWS: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು TCS ವರ್ಲ್ಡ್ 10K ಮ್ಯಾರಥಾನ್ ಹಿನ್ನೆಲೆಯಲ್ಲಿ ಕೆಲ ರಸ್ತೆಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಅಡಲಾಗಿದೆ.

ಕೆಲ ರಸ್ತೆಗಳಲಿ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚಿಸಲಾಗಿದೆ. ಬೆಳಿಗ್ಗೆ 5 ರಿಂದ 11 ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು ನಡೆಯುವ TCS ವರ್ಲ್ಡ್ 10K ಮ್ಯಾರಥಾನ್​​ನಲ್ಲಿ 30,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇರುವ ಹಿನ್ನೆಲೆ ಬೆಳಿಗ್ಗೆ 5 ಗಂಟೆಯಿಂದ 11 ಗಂಟೆಯವರೆಗೆ ವಿವಿಧ ರಸ್ತೆಗಳಲ್ಲಿ ಸಂಚಾರವನ್ನು ನಿರ್ಭಂಧಿಸಲಾಗಿದೆ. ಮಾರ್ಗ ಬದಲಾವಣೆ ಜೊತೆಗೆ ನೋ-ಪಾರ್ಕಿಂಗ್ ನಿಯಮಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ಜಾರಿಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮ್ಯಾರಥಾನ್ RSAOI ಮೈದಾನದಿಂದ ಆರಂಭವಾಗಿ ಅಲ್ಲಿಯೇ ಮುಕ್ತಾಯವಾಗಲಿದೆ. ಕಬ್ಬನ್ ರಸ್ತೆ, ಕಾಮರಾಜ್ ರಸ್ತೆ, ರಾಜಭವನ ರಸ್ತೆ ಹಾಗೂ ಅಂಬೇಡ್ಕರ್ ರಸ್ತೆಗಳಲ್ಲಿ ಮ್ಯಾರಥಾನ್​​ ನಡೆಯಲಿದ್ದು, ಹಲಸೂರು, ಫ್ರೇಸರ್ ಟೌನ್ ಮತ್ತು ಶಿವಾಜಿನಗರ ಪ್ರದೇಶಗಳ ಮೂಲಕ ಸಾಗಲಿದೆ.

ಈ ಹಿನ್ನೆಲೆಯಲ್ಲಿ ಕಬ್ಬನ್ ರಸ್ತೆ, CTO ಜಂಕ್ಷನ್‌ನಿಂದ ಮಣಿಪಾಲ್ ಸೆಂಟರ್ ವರೆಗೆ ಸಂಚಾರಕ್ಕೆ ಅವಕಾಶ ಇಲ್ಲ. ವಿಧಾನಸೌಧದ ಕಡೆ ಪ್ರವೇಶವಿರುವ ಎಲ್ಲಾ ವಾಹನಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಇನ್ನು ಸೇಂಟ್ ಜಾನ್ಸ್ ರಸ್ತೆ (ಡಿಕನ್ಸನ್ ರಸ್ತೆದಿಂದ ವೀರಪಿಳ್ಳೈ ಸ್ಟ್ರೀಟ್), ಕಾಮರಾಜ್ ರಸ್ತೆ, ಇನ್ಫ್ಯಾಂಟ್ರಿ ರಸ್ತೆ ಹಾಗೂ ಲೇಡಿ ಕರ್ಝನ್ ರಸ್ತೆಯ ಕೆಲವು ಭಾಗಗಳು ಬಂದ್​​ ಇರಲಿವೆ.

ಪರ್ಯಾಯ ಮಾರ್ಗಗಳು:
ಕ್ವೀನ್ಸ್ ರಸ್ತೆಯಿಂದ ವಾಹನಗಳು ಬಾಳೇಕುಂದ್ರಿ ಜಂಕ್ಷನ್​​ ಮಾರ್ಗವಾಗಿ ಕನ್ನಿಂಗ್‌ಹ್ಯಾಮ್ ರಸ್ತೆ ಮೂಲಕ ಚಾಲುಕ್ಯ ಸರ್ಕಲ್​​ನಿಂದ ಮೆಜೆಸ್ಟಿಕ್/ಸಿಟಿ ಮಾರ್ಕೆಟ್ ಕಡೆ ತೆರಳಬೇಕು
ಶಿವಾಜಿನಗರ ಬಸ್ ನಿಲ್ದಾಣದಿಂದ ಮೆಜೆಸ್ಟಿಕ್/ಕೆ.ಆರ್. ಮಾರ್ಕೆಟ್ ಕಡೆಗೆ ಹೋಗುವ BMTC ಬಸ್‌ಗಳು ವೆಂಕಟಸ್ವಾಮಿ ನಾಯ್ಡು ರಸ್ತೆ ಮತ್ತು ಕನ್ನಿಂಗ್‌ಹ್ಯಾಮ್ ರಸ್ತೆಯ ಮೂಲಕ ಸಾಗಬೇಕು
ಎಂಜಿ ರಸ್ತೆದಿಂದ ಹಲಸೂರು ಕಡೆಗೆ ಹೋಗುವವರು ವೆಬ್ಸ್ ಜಂಕ್ಷನ್, ಟ್ರಿನಿಟಿ ಜಂಕ್ಷನ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಬಳಸಿ ಸಾಗಬೇಕು.

ಭಾರಿ ವಾಹನಗಳಿಗೆ ಸಿಬಿಡಿ ಪ್ರದೇಶಕ್ಕೆ ಪ್ರವೇಶವಿಲ್ಲ. ಓಲ್ಡ್ ಮದ್ರಾಸ್ ರಸ್ತೆಯಿಂದ ಬರುವವರು ಎನ್‌ಜಿಇಎಫ್ ಜಂಕ್ಷನ್‌, ಸುರಂಜನ್ ದಾಸ್ ರಸ್ತೆ ಮೂಲಕ ಓಲ್ಡ್ ಏರ್‌ಪೋರ್ಟ್ ರಸ್ತೆಗೆ ಹೋಗಬೇಕು
ಕಸ್ತೂರಬಾ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಮತ್ತು ಕಬ್ಬನ್ ಪಾರ್ಕ್ ಸುತ್ತಮುತ್ತ ನೋ-ಪಾರ್ಕಿಂಗ್ ಜೋನ್ ಆಗಿರುತ್ತದೆ. ಮ್ಯಾರಥಾನ್​​ನಲ್ಲಿ ಭಾಗವಹಿಸುವವರು ಮತ್ತು ಪ್ರೇಕ್ಷಕರು ಯುಬಿ ಸಿಟಿ, ಶಿವಾಜಿನಗರ ಬಸ್ ನಿಲ್ದಾಣ ಅಥವಾ ಚರ್ಚ್ ಸ್ಟ್ರೀಟ್‌ನ ಶೋಭಾ ಮಾಲ್‌ನಲ್ಲಿ ಪಾವತಿಸಬಹುದಾದ ಪಾರ್ಕಿಂಗ್ ಸೌಲಭ್ಯವನ್ನು ಬಳಸಬಹುದು. ಎಂಎಸ್ ಬಿಲ್ಡಿಂಗ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲೂ ಅಧಿಕೃತ ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular