HomeKarnatakaನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ: ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ

ನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ: ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ

ಬೆಂಗಳೂರು: ಮೇ 10, ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಲ ಮಾರ್ಗಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಹೆಚ್ಎಎಲ್ ಗೇಟ್ ನಂ.30ರ ಮುಂಭಾಗ ನಾಳೆ ಮುಂಜಾನೆ 5ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಾರಂಭ ನಡೆಯಲಿದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ:
ಹೆಚ್.ಎ.ಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿ.ಜಿ.ಸಿ.ಎ ಕಚೇರಿವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್.ಎ.ಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ.30ರ ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)

ವಾಹನ ನಿಲುಗಡೆ ನಿರ್ಬಂಧಿಸಿರುವ ರಸ್ತೆಗಳು:
​ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್.ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ
​ಹೆಚ್.ಎ.ಎಲ್ ವಿಮಾನ ನಿಲ್ದಾಣ ಗೇಟ್ ನಂ. 30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ. 30ರ ವರೆಗೆ
ಹೆಚ್.ಎ.ಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ DGCA ಕಚೇರಿವರೆಗೆ

ಪಾರ್ಕಿಂಗ್ ವ್ಯವಸ್ಥೆ ಸ್ಥಳಗಳು:
ಹೆಚ್.ಎ.ಎಲ್ ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ (ಎಸ್.ಡಿ ರಸ್ತೆ ಜಂಕ್ಷನ್).
ಸಾರ್ವಜನಿಕರಿಗೆ- ಸರ್ ಎಸ್.ಎಂ.ವಿ, ಕಾಲೇಜು ಮೈದಾನ, ಹೆಚ್.ಎ.ಎಲ್ ಬಸ್ ಯಾರ್ಡ್
ಬೆಳಗ್ಗೆ 9 ರಿಂದ ಮಧ್ಯಾಹ್ನ 3ರೆಗೆ ನೈಸ್ ರಸ್ತೆಯಲ್ಲಿಯೂ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಈ ಮಾರ್ಗವಾಗಿ ಬರುವವರಿಗೆ ಪರ್ಯಾಯ ರಸ್ತೆಗಳನ್ನು ಬಳಸಬೇಕು.

ಪರ್ಯಾಯ ಮಾರ್ಗ:
ತುಮಕೂರು ರಸ್ತೆಯಿಂದ ಕನಕಪುರ ರಸ್ತೆ: ತುಮಕೂರು ರಸ್ತೆಯಿಂದ ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವ ವಾಹನ ಸವಾರರು ಸಿಎಂಟಿಐ ಜಂಕ್ಷನ್​​ ಬಳಿ ಬಲ ತಿರುವು ಪಡೆದು ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕ ತೆರಳಬೇಕು.

ತುಮಕೂರು ರಸ್ತೆಯಲ್ಲಿ ನಗರದ ಒಳಭಾಗದಿಂದ ಬಂದು ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವವರೂ ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕವೇ ಸಾಗಬೇಕು ಎಂದು ಸೂಚನೆ ನೀಡಲಾಗಿದೆ.

ಪ್ರಧಾನಿ ಮೋದಿಯವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಶ್ರೀ ಶ್ರೀ ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದಕ್ಕೂ ಮುನ್ನ ಹೆಚ್ ಎ ಎಲ್ ವಿಮಾನ ನಿಲ್ದಾಣದ ಪ್ರವೇಶ ದ್ವಾರಲ್ಲಿ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular