HomeKarnatakaಡೆಡ್ಲಿ ವ್ಹೀಲಿಂಗ್...2 ಬೈಕ್ ಗಳು ಮುಖಾಮುಖಿ ಡಿಕ್ಕಿ; ಯುವಕ ಸ್ಥಳದಲ್ಲೇ ದುರ್ಮರಣ

ಡೆಡ್ಲಿ ವ್ಹೀಲಿಂಗ್…2 ಬೈಕ್ ಗಳು ಮುಖಾಮುಖಿ ಡಿಕ್ಕಿ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಇಂದು ರಜೆಯದಿನವಾದ್ದರಿಂದ ಏರ್ ಪೋರ್ಟ್ ರಸ್ತೆ, ನಂದಿ ಬೆಟ್ಟದ ಮಾರ್ಗದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದೆ. ವ್ಹೀಲಿಂಗ್ ಮಾಡಲು ಹೋಗಿ ಅಪಘಾತಕ್ಕೀಡಾದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಂದಿ ಬೆಟ್ಟದ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೈಕ್ ನಿಂದ ನಿಯಂತ್ರಣ ತಪ್ಪಿ ಬಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವನಹಳ್ಳಿ ಬಳಿ ಏರ್ ಪೋರ್ಟ್ ಸಮೀಪ ಹೆದ್ದಾರಿಯಲ್ಲಿ ಪುಂಡರು, ರಸ್ತೆ ಮಧ್ಯೆಯೇ ಬೈಕ್ ಗಳಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಹುಚ್ಚಾಟ ಮೆರೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular