ಬೆಂಗಳೂರು: ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
22 ವರ್ಷದ ಶೃತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆ. ಪತಿ ಪವನ್ ಕಲ್ಯಾಣ್ ವಿರುದ್ಧ ಶೃತಿ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಒಂದುವರೆ ವರ್ಷದ ಹಿಂದಷ್ಟೇ ವಿವಾಹವಾಗಿತ್ತು. ಪತಿ ಪವನ್ ಕುಟುಂಬ ನಿರಂತರವಾಗಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಹಲವು ಬಾರಿ ರಾಜಿ ಪಂಚಾಯ್ತಿ ಮಾಡಲಾಗಿತ್ತು. ಆದಗ್ಯೂ ಕಿರುಕುಳ ನೀಡುವುದನ್ನು ಮುಂದುವರೆಸಿದ್ದ ಪವನ್ ಕುಟುಂಬ ಈಗ ಶೃತ್ಗೆ ಬಟ್ಟೆಯಿಂದ ಕತ್ತು ಬಿಗಿದು ಸಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

