HomeKarnatakaಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಇಂದು ಮುಂಜಾನೆ ಈ ಘಟನೆ ನಡೆದಿದೆ. ಆಟೋ ಚಾಲಕ ಕಿರಣ್ (25) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಳೆಯ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಕುಡಿದು ಗಲಾಟೆ ಮಾಡಿದ ಪ್ರಕರಣಗಳು ಸೇರಿದಂತೆ ಕೊಲೆಯಾದ ಕಿರಣ್ ವಿರುದ್ಧ ಕೆ.ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ಮುನ್ನರಾತ್ರಿ ಕೂಡ ಕಿರಣ್ ಕುಡಿದು ಗಲಾಟೆ ಮಾಡಿದ್ದು, ತಡರಾತ್ರಿವರೆಗೆ ವಾಗ್ವಾದ ನಡೆದ ಬಳಿಕ ಮುಂಜಾನೆ ಈ ದಾಳಿ ನಡೆದಿರುವ ಸಾಧ್ಯತೆಯಿದೆ ಎಂದು ಪೊಲಿಸರು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದು, ಸುತ್ತಮುತ್ತಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular