ಬೆಂಗಳೂರು: ಬೆಂಗಳೂರಿನ ಬಸ್ ನಿಲ್ದಾಣವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ.
ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ಪತ್ತೆಯಾಗಿದ್ದು, ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಸ್ ನಿಲ್ದಾಣವನ್ನು ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ಬೇರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಇನ್ನು ಶೌಚಾಲಯದಲ್ಲಿ ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿ ತಂದಿಟ್ಟಿದ್ದು ಯಾರು? ಉದ್ದೇಶವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.