HomeLatest NewsBREAKING NEWS: ಬೆಂಗಳೂರಿನ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ

BREAKING NEWS: ಬೆಂಗಳೂರಿನ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ

ಬೆಂಗಳೂರು: ಬೆಂಗಳೂರಿನ ಬಸ್ ನಿಲ್ದಾಣವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ಪತ್ತೆಯಾಗಿದ್ದು, ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಸ್ ನಿಲ್ದಾಣವನ್ನು ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ಬೇರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಇನ್ನು ಶೌಚಾಲಯದಲ್ಲಿ ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿ ತಂದಿಟ್ಟಿದ್ದು ಯಾರು? ಉದ್ದೇಶವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular