ಹಾವೇರಿ: 50 ಸಾವಿರ ರೂಪಾಯಿ ಲಂಚಕ್ಕೆ ಬೇದಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ.
ಮೌನೇಶ್ ಬಡಿಗೇರ್ ಲೋಕಾಯುಕ್ತ ಬಲೆಗೆ ಬಿದ್ದ ಹಾವೇರಿ ತಾಲೂಕಿನ ಬಿಇಒ. ಶಿಕ್ಷಕರೊಬ್ಬರ ಅಮಾನತು ಆದೇಶ ಹಿಂಪಡೆಯಲು ಬಿಇಒ ಮೌನೇಶ್, 50 ಸಾವಿರ ರೂಪಾಯಿ ಲಂಚಕ್ಕೆ ಬೇದಿಕೆ ಇಟ್ಟಿದ್ದರು. ನೊಂದ ಶಿಕ್ಷಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಹಾವೇರಿಯ ಬಸವೇಶ್ವರನಗರದ ತಮ್ಮ ಮನೆಯಲ್ಲಿಯೇ ಶಿಕ್ಷಕನಿಂದ ಮುಂಗಡ ಹಣವಾಗಿ 15 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಇಒ ಮೌನೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.