ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ(ಬಿಇಒ) ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಕಚೇರಿ ಅಧೀಕ್ಷಕ ಮಂಜುನಾಥ್ ಹೆಚ್.ಜಿ.(53) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಜುನಾಥ್ ಅವರು ಅಧಿಕಾರಿಗಳ ಕಿರುಕುಳವೆಂದು ಆರೋಪಿಸಿ ತುಂಗಭದ್ರಾ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರಾಗಿ ವಿಶೇಷ ಚೇತನರಾದ ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದರು.
ಸೋಮವಾರ ಬೆಳಗ್ಗೆ ಅವರು ತ್ರಿಚಕ್ರ ವಾಹನವನ್ನು ತುಂಗಭದ್ರಾ ಎಡದಂಡೆ ಕಾಲುವೆಯ ಬಳಿ ನಿಲ್ಲಿಸಿ ನಾಲೆಗೆ ಜಿಗಿದಿದ್ದಾರೆ. ಅವರ ಆತ್ಮಹತ್ಯೆಗೆ ಕೆಲಸದ ಒತ್ತಡ, ಅಧಿಕಾರಿಗಳ ಕಿರುಕುಳಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
(ಹಕ್ಕುತ್ಯಾಗ: ಈ ಲೇಖನವು ಯಾವುದೇ ರೂಪದಲ್ಲಿ ಸ್ವಯಂ-ಹಾನಿ ಅಥವಾ ಆತ್ಮಹತ್ಯೆಯನ್ನು ಉತ್ತೇಜಿಸಲು, ಪ್ರೋತ್ಸಾಹಿಸಲು ಅಥವಾ ಸಂವೇದನಾಶೀಲಗೊಳಿಸಲು ಉದ್ದೇಶಿಸಿಲ್ಲ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಭಾವನಾತ್ಮಕ ಯಾತನೆ, ಆತ್ಮಹತ್ಯಾ ಆಲೋಚನೆಗಳು ಅಥವಾ ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿದ್ದರೆ, ದಯವಿಟ್ಟು ತಕ್ಷಣದ ವೃತ್ತಿಪರ ಸಹಾಯವನ್ನು ಪಡೆಯಿರಿ. ಭಾರತದಲ್ಲಿ, ನೀವು AASRA (24/7) ಅನ್ನು ಸಂಪರ್ಕಿಸಬಹುದು: 91-9820466726 ಅಥವಾ ವಿಶ್ವಾಸಾರ್ಹ ಮಾನಸಿಕ ಆರೋಗ್ಯ ವೃತ್ತಿಪರರು, ವೈದ್ಯರು ಅಥವಾ ಸ್ಥಳೀಯ ತುರ್ತು ಸೇವೆಗಳನ್ನು ಸಂಪರ್ಕಿಸಬಹುದು.)

