HomeLatest Newsಶಿಕ್ಷಕರಿಗೆ ಕಿರುಕುಳ, ಹಣ ವಸೂಲಿ: ಬಿಇಒ ಅಮಾನತು

ಶಿಕ್ಷಕರಿಗೆ ಕಿರುಕುಳ, ಹಣ ವಸೂಲಿ: ಬಿಇಒ ಅಮಾನತು

ಬೀದರ್: ಶಿಕ್ಷಕರಿಗೆ ಕಿರುಕುಳ ನೀಡಿ ಅವರಿಂದ ಹಣ ವಸೂಲಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅಮಾನತು ಮಾಡಿದ್ದಾರೆ.

ಟಿ.ಆರ್. ದೊಡ್ಡ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಕಮಲಾಪುರದ ಡಯಟ್ ಹಿರಿಯ ಉಪನ್ಯಾಸಕರನ್ನು ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.

ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಂದ ಹಣ ಪಡೆದುಕೊಂಡು ಪರಿಷ್ಕೃತ ವೇತನ ಬಿಡುಗಡೆ ಗೊಳಿಸಿದ ಆರೋಪ ಟಿ.ಆರ್. ದೊಡ್ಡೆ ಮೇಲಿದೆ. ಕಾಲಮಿತಿ ವೇತನ ಬಡ್ತಿ ಮತ್ತು ವಾರ್ಷಿಕ ವೇತನ ಬಡ್ತಿ ಮಂಜೂರಿಗೆ ಶಿಕ್ಷಕರಿಂದ ಹಣ ಪಡೆದುಕೊಂಡಿದ್ದಾರೆ. ದೈಹಿಕ ಸದೃಢ ಪ್ರಮಾಣ ಪತ್ರ ಇಲ್ಲದೆ ರಜೆ ಮತ್ತು ವೇತನ ಬಿಡುಗಡೆ ಮಾಡಿರುವುದು, ಶಿಕ್ಷಕರು ಸಮಸ್ಯೆ ಹೇಳಿಕೊಂಡು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಅವರನ್ನು ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular