ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಭಾನುವಾರವೂ ಕ್ಯಾಶ್ ಕೌಂಟರ್ ಓಪನ್

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ 30 ದಿನದವರೆಗೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗದಂತೆ ಸೆಪ್ಟಂಬರ್ 8 ಮತ್ತು 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್ ತೆರೆಯಲಾಗುವುದು.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಅಥವಾ ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕ.ಇ.ಆರ್.ಸಿ. ನಿಯಮಗಳ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 1ರಿಂದಲೇ ನಿಯಮ ಜಾರಿಯಾಗಿದೆ.

ಹೀಗಾಗಿ ಆನ್ಲೈನ್ ಪೇಮೆಂಟ್ ಬಳಕೆ ಮಾಡದವರು ವಿದ್ಯುತ್ ಶುಲ್ಕ ಪಾವತಿಸಲು ಅನುಕೂಲವಾಗುವಂತೆ ಭಾನುವಾರವೂ ಕ್ಯಾಶ್ ಕೌಂಟರ್ ಗಳನ್ನು ತೆರೆಯಲಾಗುವುದು. ಗೃಹ, ವಾಣಿಜ್ಯ ಬಳಕೆದಾರರು, ಅಪಾರ್ಟ್ಮೆಂಟ್ ಗಳು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸಬೇಕು. 30 ದಿನಗಳ ಬಳಿಕವೂ 100 ರೂಪಾಯಿಗಿಂತ ಹೆಚ್ಚು ಶುಲ್ಕ ಬಾಕಿ ಉಳಿಸಿಕೊಂಡಿರುವ ಸಂಪರ್ಕಗಳನ್ನು ಮೀಟರ್ ರೀಡಿಂಗ್ ಗೆ ಬರುವ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಈ ಮೊದಲೇ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read