HomeLatest NewsBIG NEWS: ಸಾರ್ವಜನಿಕರ ಗಮನಕ್ಕೆ: ಈ ಪ್ರದೇಶದಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ

BIG NEWS: ಸಾರ್ವಜನಿಕರ ಗಮನಕ್ಕೆ: ಈ ಪ್ರದೇಶದಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: ವಿದ್ಯುತ್ ತಂತಿಗಳ ಬದಲಾವಣೆ ಕಾರ್ಯ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಿದ್ಯುತ್‌ ಸ್ವೀಕರಣಾ ಕೇಂದ್ರದ ವ್ಯಾಪ್ತಿಯಲ್ಲಿ ಇಂದಿನಿಂದ ಜುಲೈ 24 ರವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕೃತವಾಗಿ ಮಾಹಿತಿ ನೀಡಿದೆ.

ದೊಡ್ದಬಳ್ಳಾಪುರದ ವಿವಿಧೆಡೆ ಇಂದಿನಿಂದ ಜುಲೈ 24 ರವರೆಗೆ ಅಂದರೆ ಒಂದು ವಾರಗಳ ಕಾಲವಿದ್ಯುತ್‌​ ವ್ಯತ್ಯಯವಾಗಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (ಕೆಪಿಟಿಸಿಎಲ್) 220 ಕೆವಿ ದೊಡ್ಡಬಳ್ಳಾಪುರ ವಿದ್ಯುತ್ ಕೇಂದ್ರಕ್ಕೆ ಸಂಪರ್ಕಗೊಂಡಿರುವ 66 ಕೆವಿ ದೊಡ್ಡಬಳ್ಳಾಪುರ-ದೇವನಹಳ್ಳಿ ಪ್ರಸರಣ ಮಾರ್ಗದಲ್ಲಿ ವಿದ್ಯುತ್​ ತಂತಿಗಳನ್ನು ಬದಲಾಯಿಸಲಿದೆ. ಈ ನಿರ್ವಹಣಾ ಕಾರ್ಯವು ಈ ಪ್ರದೇಶದ 66/11 ಕೆವಿ ಸಬ್‌ಸ್ಟೇಷನ್‌ಗಳಿಗೆ ವಿದ್ಯುತ್ ಸರಬರಾಜಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಬೆಸ್ಕಾಂ ತಿಳಿಸಿದೆ.

ಇಂದಿನಿಂದ ಜುಲೈ 24 ರವರೆಗೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆ ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ನಿಟ್ಟಿನಲ್ಲಿ ತಮ್ಮ ದಿನದ ಯೋಜನೆಗಳನ್ನು ಮುಂಚಿತವಾಗಿ ಯೋಜಿಸುವಂತೆ ಬೆಸ್ಕಾಂ ಸಾರ್ವಜನಿಕರಲ್ಲಿ ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವನಹಳ್ಳಿ ಪಟ್ಟಣ, ವಸತಿ ಸಮುಚ್ಚಯಗಳು, ಗೋಕರೆ, ಯರ್ತಿಗಾನಹಳ್ಳಿ ಚಿಕ್ಕಸಣ್ಣೆ ಅವತಿ, ಭುವನಹಳ್ಳಿ, ಬಿದಲೂರು, ಬೊಮವಾರ, ವಿಶ್ವನಾಥಪುರ, ಯಲಿಯೂರು, ಚಿಮಾಚನಹಳ್ಳಿ, ಕನ್ನಮಂಗಳ, ಸಣ್ಣಅಮಾನಿಕೆರೆ, ಹೀರಾನಂದಾನಿ, ಕೋಯಿರ, ತೈಲಗೆರೆ, ಗೊಬ್ಬರಗುಂಟೆ, ಕೋರಮಂಗಲ ವ್ಯಾಪ್ತಿಯ ಸುತ್ತಮುತ್ತಲ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವಿರುವುದಿಲ್ಲ.

ಕುಂದಾಣ ವಿದ್ಯುತ್ ಉಪಕೇಂದ್ರದ ಬೆಂಗ್ರಾ ಜಿಲ್ಲಾಡಳಿತ ಕಚೇರಿ, ಕುಂದಾಣ ಗ್ರಾಮ ಪಂಚಾಯತ, ಕೊಯಿರ ಗ್ರಾಮ ಪಂಚಾಯತ, ಆಲೂರು-ದುದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಸುತ್ತಮುತ್ತಲ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕವಿರುವುದಿಲ್ಲ, ಆದ್ದರಿಂದ ವಿದ್ಯುತ್ ಗ್ರಾಹಕರು ಹಾಗೂ ರೈತರು ಸಹಕರಿಸುವಂತೆ ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular