BREAKING NEWS: ವಿದ್ಯುತ್ ಬಿಲ್ ಕೊಡುತ್ತಿದ್ದಾಗಲೇ ಹೃದಯಾಘಾತ: ಕರ್ತವ್ಯನಿರತ ಬೆಸ್ಕಾಂ ಸಿಬ್ಬಂದಿ ಸ್ಥಳದಲ್ಲೇ ಸಾವು

ಕೋಲಾರ: ವಿದ್ಯುತ್ ಬಿಲ್ ಕೊಡುತ್ತಿದ್ದ ಬೆಸ್ಕಾಂ ಸಿಬ್ಬಂದಿಯೊಬ್ಬರು ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಿದ್ದನಹಳ್ಳಿಯಲ್ಲಿ ನಡೆದಿದೆ.

ಪ್ರಕಾಶ್ ಕುಮಾರ್ ಮೃತ ದುರ್ದೈವಿ. ಸಿದ್ದನಹಳ್ಳಿಯಲ್ಲಿ ಪ್ರಕಾಶ್ ಕುಮಾರ್ ವಿದ್ಯುತ್ ಬಿಲ್ ಕೊಡುತ್ತಿದ್ದರು. ಈ ವೇಳೆ ಇದ್ದಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೃತ ಪ್ರಕಾಶ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಬೆಸ್ಕಾಂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ ಘಟನೆಯೂ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read