ಬೆಂಗಳೂರು: ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ವಿಪಕ್ಷ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನ್ನು ರಾಜ್ಯ ಸರ್ಕಾರ ಅನರ್ಹರಿಗೆ ನೀಡಿದೆ. ಈ ಮೂಲಕ ಅವ್ಯವಹಾರ ನಡೆಸಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಬಿಜೆಪಿಯಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಆರ‍್.ವಿಶ್ವನಾಥ್, ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಅವ್ಯವಹಾರ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಎಸ್ ಪಿಗೆ ದೂರು ನೀಡಲಾಗಿದೆ. ತನಿಖೆಗೆ ರಾಜ್ಯಪಾಲರಿಗೆ ಅನುಮತಿ ಕೇಳುತ್ತೇವೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು.