HomeLatest Newsಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಅವ್ಯವಹಾರ ಆರೋಪ: ಬಿಜೆಪಿಯಿಂದ ಲೋಕಾಯುಕ್ತಕ್ಕೆ ದೂರು

ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಅವ್ಯವಹಾರ ಆರೋಪ: ಬಿಜೆಪಿಯಿಂದ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ವಿಪಕ್ಷ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನ್ನು ರಾಜ್ಯ ಸರ್ಕಾರ ಅನರ್ಹರಿಗೆ ನೀಡಿದೆ. ಈ ಮೂಲಕ ಅವ್ಯವಹಾರ ನಡೆಸಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಬಿಜೆಪಿಯಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಆರ‍್.ವಿಶ್ವನಾಥ್, ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಅವ್ಯವಹಾರ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಎಸ್ ಪಿಗೆ ದೂರು ನೀಡಲಾಗಿದೆ. ತನಿಖೆಗೆ ರಾಜ್ಯಪಾಲರಿಗೆ ಅನುಮತಿ ಕೇಳುತ್ತೇವೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular