HomeKarnatakaರಾಜ್ಯದ ನೂತನ ಸಾರಥಿ ಡಿ.ಕೆ.ಶಿವಕುಮಾರ್‌ಗೆ ಶುಭಾಶಯ : ಹೊಸ ಸರ್ಕಾರದ ಮುಂದೆ ಸಿದ್ದರಾಮಯ್ಯ ಅವರ ಆಶಯವೇನು...

ರಾಜ್ಯದ ನೂತನ ಸಾರಥಿ ಡಿ.ಕೆ.ಶಿವಕುಮಾರ್‌ಗೆ ಶುಭಾಶಯ : ಹೊಸ ಸರ್ಕಾರದ ಮುಂದೆ ಸಿದ್ದರಾಮಯ್ಯ ಅವರ ಆಶಯವೇನು ?

ಬೆಂಗಳೂರು :   ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಗೆ  ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ನೂತನ ಸಾರಥಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕಳೆದ ಮೂರು ವರ್ಷಗಳ ತಮ್ಮ ಸರ್ಕಾರದ ಸಾಧನೆಗಳನ್ನು ಸ್ಮರಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಮತ್ತು ಸಾಮಾಜಿಕ ನ್ಯಾಯದ ಮಾದರಿಯನ್ನು ಹೊಸ ಸರ್ಕಾರವು ಇದೇ ರೀತಿ ಮುಂದುವರಿಸಿಕೊಂಡು ಹೋಗಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ  ಟ್ವೀಟ್ ಮಾಡಿದ  ಮಾಜಿ ಸಿಎಂ ಸಿದ್ದರಾಮಯ್ಯ  ‘’ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೂ ಹಾಗೂ ಎಲ್ಲಾ ನೂತನ ಸಚಿವರುಗಳಿಗೂ ಅಭಿನಂದನೆಗಳು’’

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕವನ್ನು ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆಯ ನಾಡನ್ನಾಗಿ ಕಟ್ಟಲು, ರಾಜ್ಯದ ಪ್ರತಿಯೊಬ್ಬರಿಗೂ ನ್ಯಾಯ, ಸ್ವಾತಂತ್ರ್ಯ ಹಾಗೂ ಸುರಕ್ಷತೆ ಒದಗಿಸಲು ಪ್ರಾಮಾಣಿಕ ಶ್ರಮಿಸಿದ ಆತ್ಮಸಂತೃಪ್ತಿ ನನಗಿದೆ. ಗ್ಯಾರಂಟಿ ಯೋಜನೆಗಳನ್ನು ಒಳಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ನ್ಯಾಯವನ್ನು ಅನುಷ್ಠಾನಕ್ಕೆ ಕೊಟ್ಟು ಕರ್ನಾಟಕ ಅಭಿವೃದ್ಧಿಯ ಹೊಸ ಮಾದರಿಯನ್ನು ಕಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ನೂತನ ಮುಖ್ಯಮಂತ್ರಿಗಳು ಹಾಗೂ ಸಚಿವರು ಎಲ್ಲರೂ ಒಗ್ಗೂಡಿ ಕರ್ನಾಟಕವನ್ನು ಇದೇ ಮಾದರಿಯ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular