ಮಧ್ಯಪ್ರದೇಶದ ಇಂದೋರ್‌ನಲ್ಲಿ ವ್ಯಕ್ತಿಯೊಬ್ಬ ಹಸುಗಳೊಂದಿಗೆ ಅಸಹಜ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಏಪ್ರಿಲ್ 7 ರಂದು ಈ ಘಟನೆ ನಡೆದಿದ್ದು, ಸಮೀಪದಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಡಿಯೊದಲ್ಲಿ, ಆರೋಪಿಯು ಕೃತ್ಯ ಎಸಗುವ ಮೊದಲು ಹಸುಗಳ ಸುತ್ತಲೂ ಅಡ್ಡಾಡುತ್ತಿರುವುದು ಕಂಡುಬರುತ್ತದೆ. ಹಸುಗಳೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸುವ ಮೊದಲು ಆ ವ್ಯಕ್ತಿ ಸ್ವಯಂಕಾಮದಲ್ಲಿ ತೊಡಗಿರುವುದು ಸಹ ಸೆರೆಯಾಗಿದೆ.
ವಿಡಿಯೊ ವೈರಲ್ ಆದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಿಜಯ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
