HomeLatest Newsಸೇಡು ತೀರಿಸಿಕೊಳ್ಳಲು ‘ಮಹಾದಾಯಿ ಯೋಜನೆ’ಗೆ ಅನುಮತಿ ನೀಡದೇ ಕರ್ನಾಟಕಕ್ಕೆ ದ್ರೋಹ: ಕೇಂದ್ರದ ವಿರುದ್ಧ ಹೋರಾಟ: ಸಿಎಂ...

ಸೇಡು ತೀರಿಸಿಕೊಳ್ಳಲು ‘ಮಹಾದಾಯಿ ಯೋಜನೆ’ಗೆ ಅನುಮತಿ ನೀಡದೇ ಕರ್ನಾಟಕಕ್ಕೆ ದ್ರೋಹ: ಕೇಂದ್ರದ ವಿರುದ್ಧ ಹೋರಾಟ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್‍ ಅವರೇ ನನಗೆ ತಿಳಿಸಿದ್ದಾರೆ ಎಂದು ಸಾವಂತ್ ಅವರು ಇಂದು ವಿಧಾನಸಭೆಯಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಇನ್ನೊಂದು ಪ್ರಹಾರವಾಗಿದೆ. 2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ಯೋಜನೆಯ ಅನುಷ್ಠಾನ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದಗೊಂಡಿದ್ದು, ಗೋವಾದ ಬಿಜೆಪಿ ಸರ್ಕಾರದ ಜೊತೆ ಷಾಮೀಲಾಗಿ ಕೇಂದ್ರ ಸರ್ಕಾರ ನಿರಂತರವಾಗಿ ಅಡ್ಡಗಾಲು ಹಾಕುತ್ತಿದೆ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಬಿಜೆಪಿ ನಾಯಕರಾಗಲಿ, ಕನ್ನಡಿಗರಿಂದಲೇ ಆರಿಸಿ ಹೋಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರಾಗಲಿ ಈ ಅನ್ಯಾಯದ ವಿರುದ್ಧ ದನಿ ಎತ್ತಲಾಗದಷ್ಟು ನಿರ್ವಿರ್ಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ ಕರ್ನಾಟಕದ ಜನತೆಯ ವಿರುದ್ಧ ಸೇಡು ತೀರಿಸಿಕೊಳ್ಳುವ ದುರುದ್ದೇಶದಿಂದಲೇ ಮಹದಾಯಿ ಯೋಜನೆಗೆ ಪರಿಸರ ಖಾತೆಯ ಅನುಮತಿಯನ್ನು ನಿರಾಕರಿಸಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ತೆರಿಗೆ ಹಂಚಿಕೆ, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಅನುದಾನ ಕಡಿತವೂ ಸೇರಿದಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ  ನಿರಂತರವಾಗಿ ಅನ್ಯಾಯ ಎಸಗುತ್ತಿದೆ.  ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆ ವಿರುದ್ಧ ನಾಡಿನ ಸಮಸ್ತ ಕನ್ನಡಿಗರನ್ನು ಜೊತೆಯಲ್ಲಿ ಕಟ್ಟಿಕೊಂಡು ಹೋರಾಟ ನಡೆಸುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular