HomeLatest NewsBIG NEWS: ಆನ್ ಲೈನ್ ಬೆಟ್ಟಿಂಗ್ ಹಗರಣ: ED ವಿಚಾರಣೆಗೆ ಹಾಜರಾದ ನಟಿ ಮಂಚು ಲಕ್ಷ್ಮಿ

BIG NEWS: ಆನ್ ಲೈನ್ ಬೆಟ್ಟಿಂಗ್ ಹಗರಣ: ED ವಿಚಾರಣೆಗೆ ಹಾಜರಾದ ನಟಿ ಮಂಚು ಲಕ್ಷ್ಮಿ

ಹೈದರಾಬಾದ್: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ನಟಿ ಮಂಚು ಲಕ್ಷ್ಮಿ ಜಾರಿ ನಿರ್ದೇಶನಾಲಯ (ED) ವಿಚಾರಣೆಗೆ ಹಾಜರಾಗಿದ್ದಾರೆ.

ಆನ್ ಲೈನ್ ಬೆಟ್ಟಿಂಗ್ ಹಾಗೂ ಜೂಜಾಟಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಕೇಸ್ ನಲ್ಲಿ ನಟಿ ಮಂಚು ಲಕ್ಷ್ಮಿ ಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಂಚು ಲಕ್ಷ್ಮಿ ಹೈದರಾಬಾದ್ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಇದೇ ಪ್ರಕರಣದಲ್ಲಿ ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಇಡಿ ವಿಚಾರಣೆಗೆ ಹಾಜರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಟ್ಟಿಂಗ್ ಆ್ಯಪ್ ಗಳ ಪ್ರಚಾರಕ್ಕೆ ಸಂಬಂಧಿಸಿದಂತೆ ನಟ-ನಟಿಯರು ಹಾಗೂ ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳ ವಿರುದ್ಧ ೫ ರಾಜ್ಯಗಳಲ್ಲಿ ದಾಖಲಾಗಿರುವ ಎಫ್ ಐ ಆರ್ ಗಳ ಆಧಾರದ ಮೇಲೆ ಇಡಿ ವಿಚಾರಣೆ ನಡೆಸುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular