ನವದೆಹಲಿ: ಅಕ್ರಮವಾಗಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು 11 ಜನರನ್ನು ಬಂಧಿಸಿದ್ದಾರೆ.
ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಸೇರಿ 11 ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಟ್ಟಿಂಗ್ ದಂಧೆ ಲೀಡರ್ ಅಶೋಕ್ ಕುಮಾರ್ ಅಲಿಯಾಸ್ ಕೇಲ್ (55) ಎಂದು ಗುರುತಿಸಲಾಗಿದೆ. ಅಶೋಕ್ ಕುಮಾರ್ ತನ್ನ ಮಗ ಸಂಜು ಹಾಗೂ ಸೋದರಳಿಯ ರೋಹಿತ್ ಗುಲಾಟಿ ಸಹಾಯದಿಂದ ಗೋವಿಂದಪುರಿಯ ಎರಡು ಕಡೆಗಳಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ.
ಬಂಧಿತ ಆರೋಪಿಗಳಿಂದ 83 ಸಾವಿರ ರೂ ನಗದು ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.