HomeKarnatakaBe Alert : ರಾಜ್ಯದಲ್ಲಿದ್ದಾರೆ ನಕಲಿ ವೈದ್ಯರು, 156 ಮಂದಿ ಪತ್ತೆ |Fake Doctors

Be Alert : ರಾಜ್ಯದಲ್ಲಿದ್ದಾರೆ ನಕಲಿ ವೈದ್ಯರು, 156 ಮಂದಿ ಪತ್ತೆ |Fake Doctors

ಬೆಂಗಳೂರು : ರಾಜ್ಯಾದ್ಯಂತ ‘ಸ್ಕ್ಯಾನಿಂಗ್ ಸೆಂಟರ್’ ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ 156 ನಕಲಿ ವೈದ್ಯರನ್ನು ಪತ್ತೆ ಹಚ್ಚಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಸ್ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದ್ದಾರೆ . ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.

ಅಕ್ರಮ ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ಕ್ರಮವಹಿಸಿ ವರದಿ ನೀಡಲು ಎಲ್ಲಾ ಡಿಎಚ್ಓ ಹಾಗೂ ಸಿ ಹೆಚ್ ಓ ಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿತ್ತು. ಅಂತೆಯೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದು, 583 ಸ್ಕ್ಯಾನಿಕ್ ಸೆಂಟರ್ ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular