ಭದ್ರಾ ಜಲಾಶಯಕ್ಕೆ ಭಾರಿ ಒಳಹರಿವು: ಒಂದೇ ದಿನ 5 ಅಡಿ ನೀರು

ಶಿವಮೊಗ್ಗ: ಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಭಾರಿ ಏರಿಕೆಯಾಗಿದೆ.

ಭದ್ರಾ ಜಲಾಶಯಕ್ಕೆ ಭಾರಿ ನೀರು ಹರಿದು ಬರುತ್ತಿದ್ದು, ಒಂದೇ ದಿನ 5 ಅಡಿಯಷ್ಟು ಏರಿಕೆ ಕಂಡಿದೆ. ಕಳೆದ 24 ಗಂಟೆ ಅವಧಿಯಲ್ಲಿ 42,165 ಕ್ಯೂಸೆಕ್ ನೀರು ಹರಿದು ಬಂದಿದೆ.

174 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ 186 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 153 ಅಡಿಗಳಾಗಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಇಂದು 36.740 ಟಿಎಂಸಿ ನೀರು ಸಂಗ್ರಹವಿದೆ. ಒಂದೇ ದಿನ ಐದು ಅಡಿ ನೀರು ಸಂಗ್ರಹವಾಗಿದ್ದು, ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read