HomeKarnatakaಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ: ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆಗೆ ಸೂಚನೆ

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ: ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆಗೆ ಸೂಚನೆ

ಶಿವಮೊಗ್ಗ: ಪ್ರಸ್ತುತ ಸಾಲಿನಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ನಿರೀಕ್ಷಿತ ಮಳೆಯಾಗದ ಹಿನ್ನೆಲೆಯಲ್ಲಿ, ಭದ್ರಾ ಅಚ್ಚುಕಟ್ಟು ಪ್ರದೇಶದ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆಗಾಗಿ ಜಲಾಶಯದ ವಿತರಣಾ ನಾಲೆಗಳಿಗೆ ದಿನಾಂಕ 17.09.2026ರ ಮಧ್ಯರಾತ್ರಿ 12.00 ಗಂಟೆಯಿಂದ ದಿನಾಂಕ 02.10.2026 ರವರೆಗೆ ಒಟ್ಟು 15 ದಿನಗಳ ಕಾಲ ನೀರನ್ನು ಹರಿಸಲು ನಿರ್ಧರಿಸಲಾಗಿದೆ.

ಅಚ್ಚುಕಟ್ಟು ಭಾಗದಲ್ಲಿ ಎದುರಾಗಿರುವ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ಹಾಗೂ ಕೆರೆ-ಹಳ್ಳಗಳನ್ನು ತುಂಬಿಸಲು ನೀರು ಹರಿಸುವಂತೆ ರೈತರು, ಶಾಸಕರು ಹಾಗೂ ರೈತ ಮುಖಂಡರು ಒತ್ತಾಯಿಸಿದ್ದರು. ಅಲ್ಲದೆ ಶಿವಮೊಗ್ಗ, ಭದ್ರಾವತಿ, ದಾವಣಗೆರೆ, ಶಾಂತಿಸಾಗರ ಮತ್ತು ಮಲೆಬೆನ್ನೂರು ಭಾಗಗಳಲ್ಲಿ ಪ್ರತಿಭಟನೆಗಳು ಸಹ ನಡೆದಿದ್ದವು.

ಈ ಕುರಿತು ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಅನ್ವಯ, ಜಲಸಂಪನ್ಮೂಲ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಮತ್ತು ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ನೀರನ್ನು ಕೇವಲ ಕುಡಿಯುವ ನೀರು, ಅಂತರ್ಜಲ ವೃದ್ಧಿ ಹಾಗೂ ಕೆರೆಗಳನ್ನು ತುಂಬಿಸಲು ಮಾತ್ರ ಬಳಸಬೇಕಾಗಿದ್ದು, ಡಿಸೆಂಬರ್ 2026 ರವರೆಗೆ ಅಭಾವ ಎದುರಾಗದಂತೆ ಸದ್ಬಳಕೆ ಮಾಡಿಕೊಳ್ಳಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಕಾರಣಕ್ಕೂ ಈ ನೀರನ್ನು ಬೆಳೆಗಳಿಗೆ ಬಳಸುವಂತಿಲ್ಲ ಹಾಗೂ ಅನಧಿಕೃತವಾಗಿ ನೀರೆತ್ತುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದ್ದು, ಅಚ್ಚುಕಟ್ಟು ಭಾಗದ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ ಕಡ್ಡಾಯ

ದಾವಣಗೆರೆ: ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಪಾಲನಾ ಸಂಸ್ಥೆಗಳನ್ನು ಕಡ್ಡಾಯವಾಗಿ ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಸಬೇಕು.

ಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ನೋಂದಣಿಯಾಗಬೇಕಾಗಿರುತ್ತದೆ ಹಾಗೂ ನೋಂದಣಿಯಾಗಿರುವ ಸಂಸ್ಥೆಗಳು ಪ್ರತಿ 5 ವರ್ಷಕ್ಕೊಮ್ಮೆ ನವೀಕರಣಗೊಳ್ಳಬೇಕಾಗಿದ್ದು, ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗದೆ ಇರುವ ಸಂಸ್ಥೆಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವಂತೆ ತಪ್ಪಿದ್ದಲ್ಲಿ ಅನಧೀಕೃತವಾಗಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ನಡೆಸುತ್ತಿದ್ದಲ್ಲಿ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ನೋಂದಣಿಯಾಗದೆ ಇರುವ ಮಕ್ಕಳ ಪಾಲನಾ ಸಂಸ್ಥೆಗಳ ಮಾಹಿತಿಯನ್ನು ಸೆಪ್ಟೆಂಬರ್ 25 ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಾಲಭವನ ಕಚೇರಿ ಜೆ.ಹೆಚ್ ಪಟೇಲ್ ಬಡಾವಣೆ, ಶಾಮನೂರು ಹತ್ತಿರ, ದಾವಣಗೆರೆ ಈ ಕಚೇರಿಗೆ ನೀಡಲು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ: 08192-222701 ಸಂಪರ್ಕಿಸುವಂತೆ ತಪ್ಪಿದ್ದಲ್ಲಿ ತಮ್ಮ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ದೀಕ್ಷಾ ಭೂಮಿ ಯಾತ್ರೆಗೆ ಆನ್‍ ಲೈನ್ ಮೂಲಕ ನೋಂದಣಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಡಾ.ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ಅ.19 ರಿಂದ 22 ರವರೆಗೆ ವಿವಿಧ ಜಿಲ್ಲೆಗಳಿಂದ ಪ್ರಯಾಣಿಸಲು ಹಾಗೂ ಹಿಂದಿರುಗಿ ಬರುವ ಸಂಬಂಧ ಬಸ್ಸು ಹಾಗೂ ರೈಲಿನ ವ್ಯವಸ್ಥೆಯನ್ನು ಮಾಡಲಾಗಿದೆ.

ಯಾತ್ರಾರ್ಥಿಗಳು ಸೆ.19 ರಿಂದ ಅ.9 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ http://swd.karnataka.gov.in ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular