HomeLatest NewsBREAKING: ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿ ದುರಂತ: ಒಂದೇ ಕುಟುಂಬದ ನಾಲ್ವರು ನೀರುಪಾಲು

BREAKING: ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿ ದುರಂತ: ಒಂದೇ ಕುಟುಂಬದ ನಾಲ್ವರು ನೀರುಪಾಲು

ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಬಿಳಚಿ ಕ್ಯಾಂಪ್ ಬಳಿ ನಡೆದಿದೆ.

ಬಟ್ಟೆ ತೊಳೆಯಲೆಂದು ಭದ್ರಾ ನಾಲೆಗೆ ಇಳಿದಿದ್ದಾಗ, ಒಬ್ಬರು ಕಾಲು ಜಾರಿ ನಾಲೆ ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಇನ್ನೊಬ್ಬರು ಹೋಗಿದ್ದಾರೆ. ಹೀಗೆ ಒಬ್ಬರ ಹಿಂದೆ ಒಬ್ಬರಂತೆ ನಾಲ್ವರೂ ನಾಲೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೀಲಾಬಾಯಿ, ಮಗ ರವಿ ಕುಮಾರ್, ಮಗಳು ಶ್ವೇತಾ ಹಾಗೂ ಅಳಿಯ ಪರಶುರಾಮ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular