ಬೆಂಗಳೂರು: ರಾಜ್ಯದಲ್ಲಿ ಶಿವರಾತ್ರಿ ಹಬ್ಬದ ಸಂದರ್ಭದಲ್ಲೇ ಸಾಲು ಸಾಲು ಅಪಘಾತ ಪ್ರಕರಣಗಳು ನಡೆದಿವೆ. ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲುಕಿನ ಬಾಳೆಹೊಳೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೊಡಗು ಮೂಲದ ಯೋಗೇಶ್ (17) ಹಾಗೂ ಅಭಿಷೇಕ್ (23) ಮೃತ ಯುವಕರು.
ಯೋಗೇಶ್ ಹಾಗೂ ಅಭಿಷೇಕ್ ಇಬ್ಬರೂ ಕಾಫಿ ತೋಟದ ಕೆಲಸಕ್ಕೆ ಬಂದಿದ್ದರು. ತೋಟದ ಕೆಲಸ ಮುಗಿಸಿ ನಡಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಕುಟುಂಬದವರ ಎದುರೇ ಇಬ್ಬರೂ ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

