ವರ್ಷದೊಳಗೆ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ: ಡಿ. ಸುಧಾಕರ್

ಶಿವಮೊಗ್ಗ: ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಇರಬಹುದಾದ ಅಡ್ಡಿ ಆತಂಕಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮನವಿ ಮಾಡಲಾಗುವುದು ಎಂದು ರಾಜ್ಯ ಯೋಜನೆ‌ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಹೇಳಿದರು.

ಮುತ್ತಿನಕೊಪ್ಪ ಗ್ರಾಮದ ಚಾನಲ್ ನಿರ್ಮಾಣ ಕಾಮಗಾರಿಗಳ ಪ್ರಗತಿ ಪರಿಶಿಲನೆ ನಡೆಸಿದ ಅವರು ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ತುಂಗಾ ಜಲಾಶಯ ಸೇರುತ್ತಿದ್ದ‌ ಹೆಚ್ಚುವರಿಯಾದ ಸುಮಾರು 17 ಟಿ.ಎಂ.ಸಿ.ನೀರನ್ನು ಈ ಚಾನಲ್ ಗಳ ಮೂಲಕ ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಉದ್ದೇಶಕ್ಕೆ ಹರಿಸಲಾಗುವುದು ಎಂದರು.

 

ಈ ಚಾನಲ್ ಕಾಮಗಾರಿ ನಡೆಯುವ ಪ್ರದೇಶದ ವ್ಯಾಪ್ತಿಯಲ್ಲಿ ಈಗಾಗಲೇ ವಿದ್ಯುತ್ ಇಲಾಖೆಯ ಪರವಾನಿಗೆ ದೊರೆತಿದ್ದು, ಹಾಗೂ ಅರಣ್ಯ ಇಲಾಖೆಯ ಅನುಮತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದರು.

ಸ್ಥಳೀಯವಾಗಿ ಎದುರಾಗಬಹುದಾದ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಯೋಜನೆಯನ್ನು ಮುಂದಿನ ಒಂದು ವರ್ಷದೊಳಗಾಗಿ ಪೂರ್ಣಗೊಳಿಸುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read