HomeKarnatakaಸೆ. 1 ರಿಂದ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

ಸೆ. 1 ರಿಂದ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

ಶಿವಮೊಗ್ಗ: ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಉದ್ದೇಶಕ್ಕಾಗಿ ಭದ್ರಾ ಬಲದಂಡೆ ನಾಲೆಯಿಂದ ನೀರನ್ನು ಹರಿಸಲು ನಿರ್ಧರಿಸಲಾಗಿದೆ.

ಪ್ರಾದೇಶಿಕ ಆಯುಕ್ತರ ಆದೇಶದಂತೆ, ದಿನಾಂಕ 01.09.2026 ರಿಂದ 10.09.2026 ರವರೆಗೆ ಪ್ರತಿದಿನ 1500 ಕ್ಯೂಸೆಕ್ ಪ್ರಮಾಣದಲ್ಲಿ ನೀರನ್ನು ಇಂಪೌಂಡ್ ರಿಸರ್ವಿಯರ್ ಗಳಿಗೆ ಹರಿಸಲಾಗುವುದು ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಡಿಯುವ ನೀರಿಗೆ ಮಾತ್ರ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಲೆಯಲ್ಲಿ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಇದನ್ನು ಉಪಯೋಗಿಸಬಾರದು.

ಅಕ್ರಮ ನೀರೆತ್ತುವುದು ನಿಷೇಧ: ರೈತರು ನಾಲೆಯಿಂದ ಅಕ್ರಮವಾಗಿ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕರಿಗೆ ಎಚ್ಚರಿಕೆ:

ನೀರು ಹರಿಯುವ ಅವಧಿಯಲ್ಲಿ ಸಾರ್ವಜನಿಕರು ಕಾಲುವೆಯಲ್ಲಿ ತಿರುಗಾಡುವುದಾಗಲಿ ಅಥವಾ ದನ-ಕರುಗಳನ್ನು ಕಾಲುವೆಗೆ ಇಳಿಸುವುದಾಗಲಿ ಮಾಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಕುಡಿಯುವ ನೀರಿನ ಅಭಾವ ತಪ್ಪಿಸಲು ಕೈಗೊಳ್ಳಲಾಗಿರುವ ಈ ಕ್ರಮಕ್ಕೆ ಸಾರ್ವಜನಿಕರು ಹಾಗೂ ರೈತಬಾಂಧವರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ವಿನಂತಿಸಿದೆ. 

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular