HomeKarnatakaಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶ

ಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶ

ಭದ್ರಾವತಿ: ಮನೆ ಬೀಗ ಮುರಿದು ಆಭರಣ ಕಳವು ಮಾಡಿದ್ದ ಪ್ರಕರಣವನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆದು ₹6.89 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಘಟನೆಯ ವಿವರ:

ಆಗಸ್ಟ್ 17, 2026 ರಂದು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಡಸ ಗ್ರಾಮದಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು, ಕಳ್ಳರು ಮನೆಯೊಂದರ ಅಡುಗೆ ಕೋಣೆಯ ವೆಂಟಿಲೇಟರ್ ಮೂಲಕ ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದರು. ಈ ಸಂಬಂಧ ನೀಡಿದ ದೂರಿನನ್ವಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 177/2026, ಕಲಂ 331(3), 305(A) BNS ಕಾಯ್ದೆಯಡಿ) ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಿಂಚಿನ ಕಾರ್ಯಾಚರಣೆ:

ಪ್ರಕರಣದ ತನಿಖೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ವಿ. ಜಿ. ಅವರ ಮಾರ್ಗದರ್ಶನದಲ್ಲಿ ಹಾಗೂ ಭದ್ರಾವತಿ ಡಿವೈಎಸ್‌ಪಿ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆಯಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ಗ್ರಾಮಾಂತರ ಇನ್ಸ್‌ಪೆಕ್ಟರ್ ಚಿದಾನಂದ, ಪಿಎಸ್‌ಐ ಶಿಲ್ಪಾ ನಾಯನೇಗಲಿ, ಪಿಎಸ್‌ಐ ಮಹೇಶ್, ಎಎಸ್‌ಐಗಳಾದ ವೆಂಕಟೇಶ್, ರವಿಕುಮಾರ್, ಚಂದ್ರಶೇಖರ್ ಹಾಗೂ ಸಿಬ್ಬಂದಿಗಳಾದ ಮಂಜುನಾಥ್, ಅರುಣ್ ಕುಮಾರ್, ಈರಯ್ಯ ಮತ್ತು ವಿಜಯ್ ಕುಮಾರ್ ಅವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ, ಆಗಸ್ಟ್ 19, 2026 ರಂದು ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ₹6,89,965/- ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣವನ್ನು ಕೇವಲ ಎರಡೇ ದಿನಗಳಲ್ಲಿ ಭೇದಿಸಿ, ಕಳುವಾಗಿದ್ದ ಸ್ವತ್ತುಗಳನ್ನು ಪತ್ತೆ ಹಚ್ಚಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular