ಬೀದರ್: ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಅವಾಚ್ಯವಾಗಿ ನಿಂದಿಸಿರುವ ಕೇಂದ್ರ ಸಚಿವ ಭಗವಂತ ಖೂಬಾಗೆ ನೋಟಿಸ್ ಜಾರಿ ಮಾಡಲಾಗಿದೆ.
ಬಗವಂತ್ ಖೂಬಾ ವಿರುದ್ಧ ಬೀದರ್ ಜಿಲ್ಲೆಯ ಭಾಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಖೂಬಾ ಅವರ್ಫ಼ೆ ಎರಡು ನೋಟಿಸ್ ನೀಡಲಾಗಿದೆ.
ಫೆ.25ಕ್ಕೆ ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಭಗವಂತ ಖೂಬಾ ಅವರ ಕಾರ್ಯಾಲಯಕ್ಕೆ ಪೊಲೀಸರು ನೋಟಿಸ್ ಅಂಟಿಸಿದ್ದರು. ಇದೀಗ ಮತ್ತೊಂದು ನೋಟಿಸ್ ಜಾರಿ ಮಾಡಿರುವ ಪೊಲೀಸರು ಆ ನೋಟಿಸ್ ನ್ನು ಕಾರ್ಯಾಲಯಕ್ಕೆ ಅಂಟಿಸಿದ್ದಾರೆ.
ಫೆಬ್ರವರಿ 21ರಂದೇ ಠಾಣೆಗೆ ಹಾಜರಾಗಿ ನೋಟಿಸ್ ಗೆ ಉತ್ತರ ಕೊಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬಂಧಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಸಚಿವ ಭಗವಂತ ಖೂಬಾ, ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿದ್ದಲ್ಲದೇ ಅವಾಚ್ಯವಾಗಿ ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಬಿರಾದಾರ್ ಭಾಲ್ಕಿ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಖೂಬಾ ವಿರುದ್ಧ ಪ್ರಕರಣ ದಾಖಲಾಗಿದೆ.

