HomeKarnatakaಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಭಗವಂತ ಖೂಬಾ ಅವರು ತಮ್ಮ ಶರ್ಟ್ ಮೇಲೆ ಬಿಜೆಪಿ ಚಿಹ್ನೆ ಇರುವ ಬ್ಯಾಡ್ ಧರಿಸಿ ಮತದಾನ ಮಾಡಿದ ಹಿನ್ನೆಲೆಯಲ್ಲಿ ಔರಾದ್ ಠಾಣೆಯಲ್ಲಿ ಚುನಾವಣಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಔರಾದ್ ನಾಲಂದಾ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 84ರಲ್ಲಿ ಭಗವಂತ ಖೂಬಾ ಕುಟುಂಬ ಸಮೇತ ಮತದಾನ ಮಾಡಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರ ಶರ್ಟ್ ಮೇಲೆ ಬಿಜೆಪಿಯ ಚಿಹ್ನೆ ಇರುವ ಬ್ಯಾಡ್ಜ್ ಧರಿಸಿದ್ದರು.0 ಮತದಾನ ಕೇಂದ್ರದ 100 ಮೀಟರ್ ಒಳಗೆ ಪಕ್ಷದ ಬ್ಯಾಡ್ಜ್ ಧರಿಸಿ ಪತ್ರಕರ್ತರೊಂದಿಗೆ ಮಾತನಾಡಿದ್ದು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಅಧಿಕಾರಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಖೂಬಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular