‘ಗೃಹಲಕ್ಷ್ಮಿ’, ‘ಭಾಗ್ಯಲಕ್ಷ್ಮಿ’ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಶಿವಮೊಗ್ಗ: ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ಈಗಲೂ ವಿತರಣೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ರದ್ದು ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಭಾನುವಾರ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಗ್ಯಲಕ್ಷ್ಮಿ ಬಾಂಡ್ ಅನ್ನು ನಾವು ಬಂದ್ ಮಾಡಿಲ್ಲ. ನಿರಂತರವಾಗಿ ಯೋಜನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪ್ರತಿ ತಿಂಗಳು 3000 ಕೋಟಿ ರೂ.ಗಳನ್ನು ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ವಿತರಿಸಲಾಗುತ್ತಿದೆ. ಹಣದ ಪ್ರಮಾಣ ದೊಡ್ಡಮಟ್ಟದಾಗಿರುವುದರಿಂದ ಫಲಾನುಭವಿ ಮಹಿಳೆಯರ ಖಾತೆಗೆ ಸೇರಲು ಸ್ವಲ್ಪ ವಿಳಂಬವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದ 18,800 ಅಂಗನವಾಡಿಗಳಿಗೆ ಮೂಲ ಸೌಲಭ್ಯ ಒದಗಿಸಲು ಇಲಾಖೆ ಅಧಿಕಾರಿಗಳಿಂದ ತಾತ್ವಿಕ ಒಪ್ಪಿಗೆ ಪಡೆಯಲಾಗಿದೆ. ಕೇಂದ್ರ ಸರ್ಕಾರ 170 ಕೋಟಿ ರೂಪಾಯಿ ಅನುದಾನವನ್ನು ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read