ಬೆಂಗಳೂರು: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ಡಿಫಾಲ್ಟ್ ಜಾಮೀನು ಅರ್ಜಿ ಕೂಡ ವಜಾಗೊಂಡಿದೆ.
ಬಿಕ್ಲುಶಿವ ಕೊಲೆ ಪ್ರಕರಣದ ಆರೋಪಿಗಳು ಹಾಗೂ ಎ5 ಆಗಿರುವ ಶಾಸಕ ಭೈರತಿ ಬಸವರಾಜ್ ಡಿಫಾಲ್ಟ್ ಜಾಮೀನು ಕೋರಿ 42ನೇ ಎಸಿಜೆ ಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಎಲ್ಲಾ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದೆ.
ಈಗಾಗಲೇ ಶಾಸಕ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಹಾಗೂ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೂಡ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ದ ಶಾಸಕ ಭೈರತಿ ಬಸವರಾಜ್, ಡಿಫಾಲ್ಟ್ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು ಎಂದು ತಿಳಿದುಬಂದಿದೆ. ಇದೀಗ ಆ ಅರ್ಜಿಯನ್ನೂ ಕೋರ್ಟ್ ವಜಾಗೊಳಿಸಿದ್ದು, ಶಾಸಕರಿಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ ಎನ್ನಲಾಗಿದೆ.

