HomeLive NewsBIG NEWS: ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಮತ್ತೊಂದು ಸಂಕಷ್ಟ: ಕಮಿಷನರ್ ಗೆ ದೂರು

BIG NEWS: ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಮತ್ತೊಂದು ಸಂಕಷ್ಟ: ಕಮಿಷನರ್ ಗೆ ದೂರು

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೈರತಿ ಬಸವರಾಜ್ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆಪ್ ನಾಯಕಿ ದೂರು ದಾಖಲಿಸಿದ್ದಾರೆ.

ಶಾಸಕ ಬೈರತಿ ಬಸವರಾಜ್ ಬೆಂಬಲಿಗರು ನನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.

ಕಳೆದ ತಿಂಗಳು ಕೂಡ ಶಾಸಕರು ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವಂತಹ ಸುಮಾರು 50 ಬೃಹತ್ ಫ್ಲೆಕ್ಸ್ ಬ್ಯಾನರ್‌ಗಳನ್ನು ವಾರ್ಡ್‌ನಾದ್ಯಂತ ಹಾಕಿಸಿದ್ದರು. ಆರಂಭದಲ್ಲಿ ಈ ಬಗ್ಗೆ ದೂರು ನೀಡಲು ಹೋದಾಗ ಎಚ್‌ಎಎಲ್ ಪೊಲೀಸರು ಶಾಸಕರ ಒತ್ತಡಕ್ಕೆ ಮಣಿದು ದೂರು ಸ್ವೀಕರಿಸಲು ನಿರಾಕರಿಸಿದ್ದರು. ನಂತರ ಲೋಕಾಯುಕ್ತರ ಮೊರೆ ಹೋದ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬರುವ ಜಿಬಿಎ ಚುನಾವಣೆಗಳಿಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿರುವ ಕಾರಣಕ್ಕಾಗಿ ನನ್ನ ಮೇಲೆ ಇಂತಹ ಹಲ್ಲೆ ನಡೆಯುತ್ತಿದೆ. ನನಗೆ ಬೆದರಿಕೆಗಳು ಬರುತ್ತಿವೆ ಎಂದು ಸತ್ಯವಾಣಿ ಆರೋಪಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಕೆರೆ ಒತ್ತುವರಿ ವಿರುದ್ಧ ಹೋರಾಟ ನಡೆಸುತ್ತಿರುವ ನನಗೆ ಏನಾದರೂ ತೊಂದರೆಯಾದರೆ ಅದಕ್ಕೆ ನೇರವಾಗಿ ಶಾಸಕ ಬೈರತಿ ಬಸವರಾಜ್ ಅವರೇ ಹೊಣೆ ಎಂದು ಎಚ್ಚರಿಸಿದ್ದಾರೆ. ಪೊಲೀಸರು ಶಾಸಕರ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಈ ಘಟನೆಯು ಕೆ.ಆರ್. ಪುರಂನಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜ್ ಬೆಂಬಲಿಗರ ವಿರುದ್ಧ ಸತ್ಯವಾಣಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular