HomeLatest NewsBREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಸಹಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆಗಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರ‍ೀಯ ಏರ್ ಪೋರ್ಟ್ ನಲ್ಲಿ ಎರಡು ದಿನಗಳ ಹಿಂದೆ ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿದ್ದಾಗ ಶಾಸಕ ಭೈರತಿ ಬಸವರಾಜ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಯಿದೆ. ಹಾಗಾಗಿ ಚಿಕಿತ್ಸೆ ಪಡೆಯಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್, ಸಿಐಡಿ ಅಧಿಕಾರಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ಸೂಚಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೈರತಿ ಬಸವರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಆಂಜಿಯೋಗ್ರಾಂ ಸೇರಿದಂತೆ ಹಲವು ಪರೀಕ್ಷೆಗಳನ್ನು, ಚಿಕಿತ್ಸೆಯನ್ನು ನೀಡಲಾಗಿತ್ತು. ಇಂದು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಗೆ ಸಿಐಡಿ ಪೊಲೀಸರು ಭೈರತಿ ಬಸವರಾಜ್ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಿದ್ದಾರೆ.

ಸಿಐಡಿ ಅಧಿಕಾರಿಗಳ ವಾದ ಆಲಿಸಿದ ಕೋರ್ಟ್, ಫೆಬ್ರವರಿ 21ರವರೆಗೆ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೆಶ ಹೊರಡಿಸಿದೆ.

ಕಿತ್ತಗನೂರಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜುಲೈ 15 ರಂದು ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ ಶೀಟರ್ ಬಿಕ್ಲು ಶಿವನನ್ನು ಮಚ್ಚು, ಲಾಂಗ್​ಗಳಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದರು. ಮೃತನ ತಾಯಿ ಭೈರತಿ ಬಸವರಾಜ್​​ ಸೇರಿದಂತೆ ಹಲವರ ಮೇಲೆ ದೂರು ನೀಡಿದ್ದರು. ಮಗನ ಕೊಲೆ ಹಿಂದೆ ಭೈರತಿ ಬಸವರಾಜ್ ಕೈವಾಡ ಇದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಎ1 ಜಗದೀಶ್ ಜೊತೆ ಶಾಸಕ ಭೈರತಿ ಬಸವರಾಜ್ ನಿರಂತರ ಸಂಪರ್ಕಹೊಂದಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ಕೇಸ್‌ನಲ್ಲಿ ಭೈರತಿ ಬಸವರಾಜ್ ಎ5 ಆಗಿದ್ದು, ಸಿಐಡಿ ಅಧಿಕಾರಿಗಳು ಭೈರತಿ ಬಸವರಾಜ್ ಅವರನ್ನು ಬಂಧಿಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular