ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ರಾಮ್ ಅವರುಗೆ ಕುಟುಂಬಾ ಹಾಗೂ ಸಿಎಲ್ ಪಿ ನಾಯಕ ಶಕಿಲ್ ಅಹ್ಮದ್ ಖಾನ್ ಅವರಿಗೆ ಕದ್ವಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಆರ್ ಜೆಡಿ ಸೇರಿದಂತೆ ಮಹಾಘಟಬಂಧನ ವಿತ್ರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದೆ.