HomeKarnatakaಶಿಗ್ಗಾಂವಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ 'ಭರತ್ ಬೊಮ್ಮಾಯಿ' ನಾಮಪತ್ರ ಸಲ್ಲಿಕೆ

ಶಿಗ್ಗಾಂವಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ‘ಭರತ್ ಬೊಮ್ಮಾಯಿ’ ನಾಮಪತ್ರ ಸಲ್ಲಿಕೆ

ಶಿಗ್ಗಾಂವಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದರು.
ಇಂದು ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅವರು ಶಿಗ್ಗಾಂವಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಭರತ್ ಬೊಮ್ಮಾಯಿ ಅವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರನಾಗಿದ್ದು, ಶಿಗ್ಗಾಂವಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಅವರು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಸಾಥ್ ನೀಡಿದರು. ಅದೇ ರೀತಿ ಶಿಗ್ಗಾಂವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹಮದ್ ಖಾನ್ ಪಠಾಣ್ ಇಂದು ನಾಮಪತ್ರ ಸಲ್ಲಿಸಿದರು. ಮೂರು ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆ ನ.13 ರಂದು ನಡೆಯಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular