ರಾಹುಲ್ ಗಾಂಧಿ ‘ಭಾರತ್ ಜೋಡೋ ಯಾತ್ರೆ’ಗೆ ಒಂದು ವರ್ಷ: ದೇಶಾದ್ಯಂತ ಕಾಂಗ್ರೆಸ್ ಕಾರ್ಯಕ್ರಮ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿಯೂ ಕಾರ್ಯಕ್ರಮ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.

ಕಳೆದ ವರ್ಷ ಸೆ. 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಶ್ಮೀರದ ಶ್ರೀನಗರದವರೆಗೆ 150 ದಿನಗಳ ಕಾಲ ರಾಹುಲ್ ಗಾಂಧಿ ಕಾಲ್ನಡಿಗೆ ಜಾಥಾ ನಡೆಸಿದ್ದರು. 12 ರಾಜ್ಯಗಳಲ್ಲಿ ಯಾತ್ರೆ ಸಾಗಿತ್ತು. ದೇಶವ್ಯಾಪಿ ಭಾರತ್ ಜೋಡೋ ಯಾತ್ರೆಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಒಂದು ವರ್ಷದ ಸಂಭ್ರಮವನ್ನು ಬೃಹತ್ ಮಟ್ಟದಲ್ಲಿ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಪ್ರತಿ ಜಿಲ್ಲೆ ಜಿಲ್ಲೆಯಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಯಾತ್ರೆ ನಡೆಸಿ ಸಂಚಲನ ಮೂಡಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read